ಬೆಳಗಾವಿ-28:ನಿನ್ನೆ ಕಾಂಗ್ರೆಸ್ ಪಕ್ಷದ ಸೈಯದ್ ನಾಸೀರ್ ಹುಸೇನ್ ರಾಜ್ಯಸಭೆಗೆ ಆಯ್ಕೆಯಾದ ಗೆಲುವಿನ ಸಂಭ್ರಮದ ಸಂರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಕೃತ್ಯ ಖಂಡಿಸಿ ಬಿಜೆಪಿ ಮುಖಂಡರು ಕಾರ್ಯಕರ್ತರು ಬಿಜೆಪಿ ಯುವ ಮೋರ್ಚಾ
ನೇತೃತ್ವದಲ್ಲಿ ಬುಧವಾರ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಅರ್ಪಿಸಿದರು
ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರಕಾರ, ಸಿಎಂ ವಿರುದ್ದ ಘೋಷಣೆ ಮೊಳಗಿಸಿದರು. ಕಾಂಗ್ರೆಸ್ ಸರಕಾರ ಇರುವಾಗ ನಾವ್ಯಾರಿಗೆ ಹೆದರಬೇಕು’ ಎಂಬ ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿ ನೀಚರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವ ಮೂಲಕ ತಕ್ಕ ಪಾಠ ಕಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಉಜ್ವಲ ಬಡವಾನಾಚೆ,ಸೇರಿದಂತೆ ಇತರರು ಬಿಜೆಪಿ ಕಾರ್ಯಕರ್ತರು ಉಪಸ್ಥಿತಿರಿದ್ದರು.