ಬೆಳಗಾವಿ-01:ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬಂದ ಕಾಡಾನೆಯೊಂದು ಶುಕ್ರವಾರ ನಸುಕಿನ ಜಾವ ನಗರದಲ್ಲಿ ಸಂಚರಿಸಿ ಕಂಗ್ರಾಳಿಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತು. ಅದೃಷ್ಟವಶಾತ್ ಯಾವುದೇ ಜೀವ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲ.
ನಸುಕಿನ ಜಾವ ವಾಕಿಂಗ್ ಹೋಗುತ್ತಿದ್ದ ಜನ ಮೊದಲು ಆನೆಯನ್ನು ಕಂಡು ದಂಗಾದರು. ಈ ವಿಷಯ ನಗರದಲ್ಲಿ ಹರಡುತ್ತಿದ್ದಂತೆ ಜನ ತಂಡೋಪತಂಡವಾಗಿ ಆಗಮಿಸಿ ಆನೆ ನೋಡಲು ಮುಗಿಬಿದ್ದರು. ನಿದ್ದೆಯಲ್ಲಿದ್ದ ಜನರು ಗಾಬರಿ ಬೀಳುವಂತಾಯಿತು. ಸುಮಾರು ಮೂರು ಗಂಟೆಗಳ ಕಾಲ ನಗರದಲ್ಲಿ ಸುತ್ತಮುತ್ತ ಸಂಚರಿಸಿದ ಆನೆ ಉಚಗಾವಿ ಕಡೆ ಸಾಗಿತು.
ಆನೆಯನ್ನು ಹಿಡಿಯಲು ಅರಣ್ಯಾಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಕಳೆದ ವರ್ಷ ಚಿರತೆ ಪ್ರತ್ಯೇಕವಾಗಿ ಜನರಲ್ಲಿ ಆತಂಕ ಸೃಷ್ಟಿ ಮಾಡಿ ಓರ್ವನಿಗೆ ಗಾಯ ಮಾಡಿ ಹೋಗಿತ್ತು. ಈಗ ಆನೆ ಕಂಡ ಜನರಲ್ಲಿ ಆತಂಕ ಸೃಷ್ಟಿಸಿದ್ದರೆ, ಇನ್ನೂ ಕೆಲವರು ಮೊಬೈಲ್ ನಲ್ಲಿ ಸೆಲ್ಪಿ ತೆಗೆಯುತ್ತ ಹುಚ್ಚಾಟ ಮೆರೆಯುತ್ತಿದ್ದರೆ,ಇನ್ನು ಕೆಲವರಿಗೆ ಈ ಆನೆ ನೋಡಿ ತಮಾಷೆಯಾಗಿದೆ.