ಮೂಡಲಗಿ-03: ಕಲ್ಲೋಳಿ ಪಟ್ಟಣದ ದುರ್ಗಾದೇವಿ ದೇವಸ್ಥಾನ ಹತ್ತಿರದ ಅಂಗನವಾಡಿ ಕೇಂದ್ರ 428 ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಿದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ದಿ ಅಧಿಕಾರಿ ಯಲ್ಲಪ್ಪ ಗದಾಡಿ, ಪಟ್ಟಣ ಪಂಚಾಯತ ಸದಸ್ಯೆ ಲಕ್ಷ್ಮೀ ಗಾಣಿಗೇರ, ಪ್ರಮುಖರಾದ ಹಣಮಂತ ಸಂಗಟಿ, ಶಿವಪ್ಪ ಬಿ.ಪಾಟೀಲ, ಅಡಿವೆಪ್ಪ ಕುರಬೇಟ, ಈರಣ್ಣ ಮುನ್ನೋಳಿಮಠ, ಮಂಜುಳಾ ಹಿರೇಮಠ, ವೈದ್ಯಾಧಿಕಾರಿ ಡಾ. ಸವಿತಾ ಮೂಡಲಗಿ ಸೇರಿದಂತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇನ್ನೂ ಅನೇಕರು ಹಾಜರಿದ್ದರು.