ಬೆಳಗಾವಿ-05:ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿಯ ಅಂಗಡಿಗಳ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕೆಂದು ರಾಜ್ಯ ಸರಕಾರ ನೀಡಿದ ಆದೇಶದ ಗಡುವು ಮುಗಿದರೂ ಅವುಗಳ ತೆರವಿಗೆ ಕಾರ್ಯಾಚರಣೆ ನಡೆಸಿಲ್ಲ ಎಂದು ಆರೋಪಿಸಿ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಅರ್ಪಿಸಿದರು.
ಪಾಲಕೆ ವ್ಯಾಪ್ತಿಯಲ್ಲಿ ಬರುವ ಎ.ಪಿ.ಎಂ.ಸಿ ಮಾರುಕಟ್ಟೆಯ ಎಲ್ಲ ಅಂಗಡಿ ಮುಂಗಟ್ಟುಗಳ ನಾಮ ಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಅಳವಡಿಸಬೇಕೆಂಬ ಸರಕಾರದ ಆದೇಶ ಇದ್ದರೂ ಕೂಡಾ ಅನ್ಯ ಭಾಷೆಗಳ ನಾಮಫಲಕಗಳು ಹೆಚ್ಚಾಗಿದೆ ಎಂದು ಆರೋಪಿಸಿದ ಅವರು ಮಾರ್ಚ್ 5 ರೊಳಗಾಗಿ
ತೆರವುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇಲ್ಲವಾದಲ್ಲಿ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಘಟಕ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
ಈ ಪ್ರತಿಭಟನೆಯಲ್ಲಿ ಕರುನಾಡು ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ ನಾಯಕ ಸೇರಿದಂತೆ ಇತರರು ಹಾಜರಿದ್ದರು.