ಬೆಳಗಾವಿ-05:ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ರೈತ ಮುಖಂಡರೊಬ್ಬರಿಗೆ ಟಿಕೆಟ್ ನೀಡಬೇಕೆಂದು ರಾಷ್ಟ್ರೀಯ ರೈತ ಸಂಘದ ವತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಒತ್ತಾಯಿಸಲಾಗುವುದು ಎಂದು ರಾಷ್ಟ್ರೀಯ ರೈತರ ಸಂಘದ ಮುಖಂಡ ಪ್ರಕಾಶ ನಾಯಕ ಹೇಳಿದರು.
ನಡೆದ ಸೋಮವಾರ ಪತ್ರಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರು ಎಲ್ಲವನ್ನು ಹೋರಾಟದ ಮೂಲಕವೇ ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಆದ್ದರಿಂದ ರೈತರು ಸಂಸದ ಭವನದಲ್ಲಿದ್ದರೆ ರೈತರ ಸಮಸ್ಯೆಗಳನ್ನು ಆಲಿಸುವರೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ವಚನದಂತೆ ರೈತ ಸಂಘೋಕಾ ಸಾಥ ಸಾಥ್. ಹಾಗಾದಲ್ಲಿ ಮಾತ್ರ ರೈತರ ಸಾಲ ಮನ್ನಾವಾಗುವುದು. ಅಲ್ಲದೆ, ರೈತರ ಶ್ರಮಕ್ಕೆ ಆರ್ಥಿಕತೆಯ ಭದ್ರೆತೆ ಮಾನದಂಡದ ಒದಗಿಸುವ ಮೂಲಕ ರೈತರ ಬದುಕನ್ನು ಅಭಿವೃದ್ಧಿಗೊಳಿಸಿದರೆ ಬಲಿಷ್ಠ ರಾಷ್ಟ್ರ ಕಟ್ಟಲು ನೆರವಾಗಲಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಪಕವಾಗಿ ಬರಗಾಲ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಕಾನೂನು ವ್ಯವಸ್ಥೆ ವೈಫಲ್ಯ ಕಂಡಿದೆ ಆದ್ದರಿಂದ ಕೂಡಲೇ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ರೈತರ ಪರವಾಗಿ ಇರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು.