ಬೆಂಗಳೂರು-27: ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯುರಪ್ಪ ಅವರ ನೇತೃತ್ವದಲ್ಲಿ ಬುಧವಾರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಮೊದಲ ಹಂತವಾಗಿ ನೂತನ ಪದಾಧಿಕಾರಿಗಳ ಸಭೆ ಮತ್ತು ಉದ್ಘಾಟನೆ ನಡೆಯಿತು ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ ಯಡಿಯುರಪ್ಪ ಅವರು ಮುಂಬರುವ ಲೋಕಸಭಾ ಚುನಾವನೆ ಹಿನ್ನಲೆಯಲ್ಲಿ ಈ ಸಭೆ ಕರೆಯಲಾಗಿದ್ದು ರಾಜ್ಯಾದಂತ ಪಕ್ಷದ ಸಂಘಟನೆಗಾಗಿ ಹಿರಿಯ ನಾಯಕರ ನೇತೃತ್ವ ಹಾಗೂ ಮಾರ್ಗದರ್ಶನದಂತೆ ರಾಜ್ಯದಲ್ಲಿ ಎನ್.ಡಿ.ಎ. ಎಲ್ಲಾ ೨೮ ಕ್ಷೇತ್ರಗಳನ್ನು ಗೆಲ್ಲುವುದಾಗಿ ತಿಳಿಸಿದರು, ನೂತನ ಪದಾಧಿಕಾರಿಗಳೆಲ್ಲರು ಎಲ್ಲ ಜಿಲ್ಲೆಗಳಿಗೆ ತೆರಳಿ ಪ್ರಮುಖದಿಂದ ಅಭಿಪ್ರಾಯ ಸಂಗ್ರಹಿಸಿ ಜಿಲ್ಲಾಧ್ಯಕ್ಷರು, ಜಿಲ್ಲಾಪದಾಧಿಕಾರಿಗಳನ್ನು ಆಯ್ಕೆ ಮಾಡಲಿದ್ದು ಎಲ್ಲರ ಅಭಿಪ್ರಾಯದೊಂದಿಗೆ ಪಕ್ಷವನ್ನು ಮುನ್ನಡೆಸುವ ತಿರ್ಮಾನ ಕೈಗೊಳ್ಳಲಾಯಿತು. ನಂತರ ಎಲ್ಲರ ಅಭಿಪ್ರಾಯ ಪಡೆದು ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ, ಪಕ್ಷ ಸಂಘಟನೆ, ಲೋಕಸಭಾ ಚುನಾವನೆ ಎದುರಿಸುವುದರ ಕುರಿತು ಸಲಹೆ ಪಡೆದರು. ರಾಜ್ಯದಲ್ಲಿ ತಳಮಟ್ಟದ ಸಂಘಟನೆ, ಹೋರಾಟ ಮತ್ತು ಪ್ರತಿಭಟನೆಯ ರೂಪುರೇಷೆ ಬಗ್ಗೆ ಚರ್ಚಿಸಲಾಯಿತು. ಬಿಜೆಪಿ ರೈತರ ವಿರುದ್ಧ ನಡೆಯುತ್ತಿರುವ ಸರ್ಕಾರ ಹಾಗೂ ಸಚಿವರ ವಿರುದ್ಧ ಹೋರಾಡಲಿದ್ದು ರೈತ ಸಮುದಾಯಕ್ಕೆ ಆತ್ಮವಿಶ್ವಾಸ ಹಾಗೂ ಧೈರ್ಯ ತುಂಬುವ ಕೆಲಸ ಬಿಜೆಪಿ ಮಾಡಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ವಿ. ಸುನೀಲಕುಮಾರ್, ಪಿ.ರಾಜೀವ, ಪ್ರೀತಮಗೌಡಾ, ನಂದೀಶ ರೇಡ್ಡಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ ಜಿ.ವಿ., ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆರೊಂದಿಗೆ ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.