ಬೆಳಗಾವಿ-೧೮: ಕಳೆದ ತಿಂಗಳು ಡಾ. ಸಿದ್ದರಾಮಪ್ಪ ನಿವೃತ್ತರಾಗಿದ್ದು ಆ ನಂತರ ಬೆಳಗಾವಿ ಪೊಲೀಸ್ ಆಯುಕ್ತರ ಹುದ್ದೆ ಖಾಲಿ ಇರುವುದರಿಂದ, ಇಡಾ ಮಾರ್ಟಿನ್ ಅವರನ್ನು ಆ ಹುದ್ದೆಗೆ ನೇಮಿಸಲಾಯಿತು. ಈ ಮಧ್ಯೆ ಬೆಳಗಾವಿ ಪೊಲೀಸ್ ಆಯುಕ್ತರಾಗಿ ಲಾಡಾ ಮಾರ್ಟಿನ್ ಮಾರ್ಬಾನಿಯಾಂಗ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಮೇಘಾಲಯ ಮೂಲದ ಮಾರ್ಟಿನ್ ಅವರು 2009 ರಲ್ಲಿ ಐಪಿಎಸ್ ಅಧಿಕಾರಿಯಾದ ನಂತರ ಗುಲ್ಬರ್ಗ, ಯಾದಗಿರಿ ಜಿಲ್ಲೆ ಮತ್ತು ಸಿಐಡಿ ಬೆಂಗಳೂರು ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ. 44 ವರ್ಷದ ಯುವ ಐಪಿಎಸ್ ಅಧಿಕಾರಿ ಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಇಡಾ ಮಾರ್ಟಿನ್ ಮಾರ್ಬಾನಿಯಾಂಗ್ ಅವರು ಬೆಳಗಾವಿ ಪೊಲೀಸ್ ಕಮಿಷನರ್ ಜವಾಬ್ದಾರಿಯನ್ನು ಹೇಗೆ ನಿರ್ವಹಿಸುತ್ತಾರೆ ಎಂಬುದೇ ಎಲ್ಲರ ಗಮನ.