ಬೆಂಗಳೂರು-೨೨:: ಮುಂದಿನ ಲೋಕಸಭೆ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಎರಡನೇ ಪಟ್ಟಿ ಪ್ರಕಟವಾಗಿದೆ. ಒಟ್ಟು 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ನಿರ್ಧರಿಸಲಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಕಾರವಾರ(ಉ.ಕ)ದಿಂದ ಮಾಜಿ ಶಾಸಕ ಡಾ.ಅಂಜಲಿ ನಿಂಬ್ಳಾಕರ್, ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ನಾಮನಿರ್ದೇಶನಗೊಂಡಿದ್ದಾರೆ. ನಾಲ್ವರು ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮಗೊಂಡಿಲ್ಲ.
ಸೌಮ್ಯಾ ರೆಡ್ಡಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ರಾಜೀವ್ ಗೌಡ ಬೆಂಗಳೂರು ಉತ್ತರದಿಂದ ಸ್ಪರ್ಧಿಸಲಿದ್ದಾರೆ. ಎಐಸಿಸಿ ಪ್ರಕಟಿಸಿರುವ ರಾಜ್ಯ ಕಾಂಗ್ರೆಸ್‌ನ ಮೂರನೇ ಮತ್ತು ಎರಡನೇ ಪಟ್ಟಿ ಇದಾಗಿದೆ. ಎಐಸಿಸಿ ಒಟ್ಟು 57 ಹೆಸರುಗಳನ್ನು ಪ್ರಕಟಿಸಿದೆ.