23/12/2024
IMG-20240322-WA0001

IMG 20240310 WA0006 -

ಬೆಳಗಾವಿ-೨೨:ಬೆಳಗಾವಿಯ ಉಪನೋಂದಣಿ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಫ್ಯಾನ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಗುರುವಾರ ಮಧ್ಯಾಹ್ನ  ನಡೆದಿದೆ. ಬೆಂಕಿ ಹೊತ್ತಿಕೊಂಡಾಗ ನಾಗರಿಕರು ಕಚೇರಿಯಲ್ಲಿ ಕೆಲಸ ಮಾಡಲು ಬಂದಿದ್ದರು. ಸಿಬ್ಬಂದಿ ಸಕಾಲದಲ್ಲಿ ಅವರನ್ನು ಹೊರತೆಗೆದರು.

ಈ ವೇಳೆ ಸಿಬ್ಬಂದಿ ಸಕಾಲದಲ್ಲಿ ಬೆಂಕಿ ನಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಆದರೆ ಉಪನೋಂದಣಿ ಕಚೇರಿಯಲ್ಲಿ ಇಂದು ಎಲ್ಲಾ ಕೆಲಸಗಳು ಸ್ಥಗಿತಗೊಳ್ಳಲಿದ್ದು, ನಾಳೆಯಿಂದ ಕಚೇರಿಯಲ್ಲಿ ಎಲ್ಲಾ ಕೆಲಸಗಳು ಸುಗಮವಾಗಲಿದೆ ಎಂದು ತಿಳಿಸಲಾಗಿದೆ. ಸಮಯಕ್ಕೆ ಸರಿಯಾಗಿ ಕಚೇರಿಯಲ್ಲಿನ ಸ್ವಿಚ್‌ಗಳನ್ನು ಸ್ಥಗಿತಗೊಳಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ.

error: Content is protected !!