23/12/2024
IMG-20240322-WA0002

IMG 20240310 WA0006 -

ಬೆಳಗಾವಿ-೨೨: ಮೂಡಿಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಿಸಿದ್ದು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕೆಂದು ಆಳ್ವಾಸ್ ಸಂಸ್ಥೆಯ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ ತಿಳಿಸಿದರು.

ನಗರದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ  ಅವರು. 10ನೇ ತರಗತಿಯಲ್ಲಿ ಸಿಬಿಎಸ್ಸಿ (ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ), ಐಸಿಎಸ್ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ(ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆ ಬರೆಯಬಹುದು. ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ಅರ್ಹತೆ ಪಡೆದ ವಿದ್ಯಾರ್ಥಿಗಳು ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ, ವಾಣಿಜ್ಯ ಅಥವಾ ಕಲಾ ವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗುತ್ತಾರೆ ಎಂದು ಹೇಳಿದರು.

ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಸಾಮರ್ಥ್ಯ ಕುರಿತು 100 ಅಂಕಗಳ ಪರೀಕ್ಷೆಯು ಮಾರ್ಚ್ 31ರಂದು ಸಿಬಿಎಸ್ಸಿ ಮತ್ತು ಐಸಿಎಸ್ಇ ವಿದ್ಯಾರ್ಥಿಗಳಿಗೆ ಹಾಗೂ ಏಪ್ರಿಲ್ 14ರಂದು ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮೂಡುಬಿದಿರೆಯ ವಿದ್ಯಾಗಿರಿ ಶ್ರೀಮತಿ ಸುಂದರಿ ಆಳ್ವ ಆವರಣದಲ್ಲಿನ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಇಂಗ್ಲೀಷ ಮಾಧ್ಯಮದಲ್ಲಿ ಪರೀಕ್ಷಾ ಪತ್ರಿಕೆ ಇರಲಿದೆ ಎಂದು ಹೇಳಿದರು.

ಸಿಬಿಎಸ್ಸಿ ಮತ್ತು ಐಸಿಎಸ್ಇ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮಾರ್ಚ್ 28 ಕೊನೆಯ ದಿನಾಂಕ, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಏಪ್ರಿಲ್ 10ರೊಳಗೆ ಅರ್ಜಿ ಸಲ್ಲಿಸಬಹುದು. http://scholarship.alvas.org/puc/login.php ವೆಬ್ ಸೈಟ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಸಾದ ಶೆಟ್ಟಿ ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ 8884477588‌ / 6366377827/ 6366377823 ನಂಬರ್ ಗೆ ಸಂಪರ್ಕಿಸಬೇಕೆಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ವಿಠ್ಠಲ ಹೆಗಡೆ, ಸಂಸ್ಥೆ ಆಡಳಿತಾಧಿಕಾರಿಯಾದ ಪದ್ಮರಾಜ್ ರೈ ಪಾಲ್ಗೊಂಡಿದ್ದರು.

error: Content is protected !!