ಯಮಕನಮರಡಿ-೨೩: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡುವ ಮೂಲಕ ನಾಡಿನ ಜನರ ಹಿತಕಾಯುವ ಕೆಲಸ ಮಾಡಿದೆ. ಪ್ರತಿಯೊಂದು ಮನೆಯಲ್ಲೂ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳ ಪಲಾನುಭವಿಗಳಿದ್ದು ಇವರೆಲ್ಲಾ ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆಂಬ ಭರವಸೆ ಇದೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಪ್ರಿಯಂಕಾ ಜಾರಕಿಹೊಳಿ ಹೇಳಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹೆಬ್ಬಾಳ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಚುನಾವಣೆಯ ನಿಮಿತ್ತ ಆಯೋಜಿಸಲಾದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಬೂತ ಮಟ್ಟದ ಸಭೆಯಲ್ಲಿ ಅವರು ಮಾತನಾಡಿ, ಕಾಂಗ್ರೆಸ್ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಅರಿವು ಮೂಡಿಸುವ ಮಹತ್ತರವಾದ ಜವಾಬ್ದಾರಿ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರ ಮೇಲಿದೆ ಎಂದ ಅವರು, ದೇಶದ ಭದ್ರ ಬುನಾದಿಗೆ ಯುವಕರು ರಾಜಕೀಯಕ್ಕೆ ಬರಬೇಕಾಗಿದೆ. ಹೀಗಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಸಿಕ್ಕಿದೇ , ತಂದೆಯರಿಗೆ ತೋರಿದ ಅಭಿಮಾನ- ಬೆಂಬಲ ನಿಮ್ಮ ಮನೆ ಮಗಳಾದ ನನಗೂ ನೀಡಿ, ಕ್ಷೇತ್ರದ ಜನರ ಸೇವೆ ಮಾಡಲು ಮತದಾರರು ಆಶೀರ್ವಾದ ಮಾಡಬೇಕು” ಎಂದರು.
ಶೈಕ್ಷಣಿಕ ಸೇರಿದಂತೆ ಕ್ರೀಡಾ ಪಟುಗಳಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ದಿಂದ ಸಹಾಯ-ಸಹಕಾರ ಮಾಡಲಾಗಿದೆ. ನಿಮ್ಮ ಮನೆ ಮಗಳನ್ನು ಮತದಾರರು ಸಹಕರಿಸಬೇಕು. ಈ ಕ್ಷೇತ್ರದಿಂದ ಗೆಲ್ಲಲು ಶಕ್ತಿ ತುಂಬಬೇಕು ಎಂದು ಹೇಳಿದರು.
ಯುವ ನಾಯಕ ರಾಹುಲ್ ಜಾರಕಿಹೊಳಿ ಮಾತನಾಡಿ, ಬೇರುಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಕಾರ್ಯಕರ್ತರು ಸಿದ್ದರಾಗಬೇಕು. ಸಹೋದರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಮುಂದಾಗಬೇಕು. ದೇಶದಲ್ಲಿ ಸ್ವಚ್ಛ ಆಡಳಿತ ನೀಡಿದವರು ಕಾಂಗ್ರೆಸ್, ದೇಶಕ್ಕೆ ಸ್ವಾತಂತ್ರ್ಯ ಸಿಗಲು ಹೋರಾಟ ಮಾಡಿದವರು ಕಾಂಗ್ರೆಸ್ . ಹೀಗಾಗಿ ಜಿಲ್ಲೆ ಸೇರಿದಂತೆ ದೇಶದ ಅಭಿವೃದ್ಧಿಗೆ ಕಾರಣವಾಗಿರುವ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಟ್ಟು ಸಹೋದರಿ ಆಯ್ಕೆ ಮಾಡಿ ಲೋಕಸಭೆಗೆ ಕಳಿಸೋಣ ಎಂದರು.
‘ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಮುಖಂಡರ ಕೊಡುಗೆ ಅಪಾರ. ಸಾಮಾಜಿಕ ನ್ಯಾಯ ಕೊಡುವಲ್ಲಿ ಕಾಂಗ್ರೆಸ್ ಪಕ್ಷ ದ ಪಾತ್ರ ಮುಖ್ಯ ಪಾತ್ರ ವಹಿಸಿದೆ. ಇಂದಿನ ನಿರುದ್ಯೋಗ ಹೆಚ್ಚಳಕ್ಕೆ ಬಿಜೆಪಿಯೇ ಕಾರಣ. ಅಚ್ಛೆ ದಿನ್ ಬರುತ್ತವೆ ಎಂದು ಹೇಳಿರುವ ಬಿಜೆಪಿ, 9 ವರ್ಷ ಗತಿಸಿದರೂ ಯಾವುದೇ ಅಚ್ಛೆ ದ್ದಿನ್ ತರಲಿಲ್ಲ’ ಎಂದ ಅವರು, ಕಾಂಗ್ರೆಸ್ ಕಾರ್ಯಕರ್ತರು ಅಭಿವೃದ್ಧಿ ಹಾಗೂ ಪಕ್ಷ ದ ತತ್ವ ಸಿದ್ಧಾಂತಗಳನ್ನು ಜನರಿಗೆ ಮುಟ್ಟಿಸುವ ಮೂಲಕ ಬೂತ ಮಟ್ಟದಿಂದ ಪಕ್ಷ ಸಂಗಟಿಸಲು ಕಾರ್ಯಕರ್ತರು ಸಿದ್ದರಾಗಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
ಇದೇ ವೇಳೆ ಹೆಬ್ಬಾಳ ಗ್ರಾಮದ ಮುಖಂಡರು ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಪ್ರಿಯಂಕಾ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿಶಾಲ ಖೋತ, ಗುರು ಹಿರೇಮಠ, ಶಹನಾಜ್ ಬಡೆಕಾಯಿ, ಯಮಕನಮರಡಿ ಗ್ರಾಪಂ ಅಧ್ಯಕ್ಷರು ಆಸ್ಮ ಪನಿಬಂದ್, ಮಾಂತೇಶ್ ಮಗದುಮ್ಮ, ಉಪಾಧ್ಯಕ್ಷರು ರಾಜು ಕುದುರೆ , ಈರಣ್ಣ ಬಿಸಿರೊಟ್ಟಿ, ಕಿರಣ್ ರಜಪೂತ, ಹತ್ತರಿಗಿ ಗ್ರಾಪಂ ಅಧ್ಯಕ್ಷರು ಸಮೀರ್ ಬೇಪಾರಿ, ಮಾಜಿ ಗ್ರಾಮ ಪಂ ಅಧ್ಯಕ್ಷರು ಮಹದೇವ್ ಪಟ್ಟೋಳಿ, ಈರಣ್ಣ ಕುಡಚಿ, ಜೋಮಲಿಂಗ ಪಟೋಳಿ, ಶಂಕರ್ ಕುಡಚಿ, ಬಸು ಅತ್ತಿಮರದ, ರವಿ ಜಿಂಡ್ರಾಳಿ, ಹೆಬ್ಬಾಳ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತಿರಿದ್ದರು.