23/12/2024
IMG-20240321-WA0035

IMG 20240310 WA0006 -

ಬೆಳಗಾವಿ-೨೩: ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೇಂದ್ರ, ಮಾದರಿ ನೀತಿ ಸಂಹಿತೆ ನಿಯಂತ್ರಣ ಕೊಠಡಿ ಹಾಗೂ C-Vigil ಕೊಠಡಿಯನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಸದರಿ ನಿಯಂತ್ರಣ ಕೊಠಡಿಗಳನ್ನು ಬೆಳಗಾವಿ ವಿಶ್ವೇಶ್ವರಯ್ಯಾ ನಗರದ ಸ್ಮಾರ್ಟಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

ದೂರು ನಿರ್ವಹಣಾ ಕೇಂದ್ರ ದೂರವಾಣಿ ಸಂಖ್ಯೆ 0831-2007015, ಮಾದರಿ ನೀತಿ ಸಂಹಿತೆ ಕೊಠಡಿ ಸಂಖ್ಯೆ 0831-2007018, ಸಿವಿಜಿಲ್(C-Vigil) ದೂರವಾಣಿ ಸಂಖ್ಯೆ 0831-2007017 ಗೆ ಸಾರ್ವಜನಿಕರು ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!