23/12/2024
IMG-20240321-WA0035

IMG 20240310 WA0006 -

ಬೆಳಗಾವಿ-೨೩ ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.

ಈ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳು ಹಾಗೂ ದೇವಸ್ಥಾನ, ಮಂದಿರ/ ಚರ್ಚ/ಮಸೀದಿ ಹಾಗೂ ಪ್ರಾರ್ಥನಾ ಸ್ಥಳಗಳಿಗೆ ಸಂಬಂಧಿಸಿದ ಆಡಳಿತ ಮಂಡಳಿಗಳು ಅಥವಾ ಮುಖ್ಯಸ್ಥರುಗಳು ದೇವಸ್ಥಾನಗಳಲ್ಲಿ/ಮಂದಿರಗಳಲ್ಲಿ/ ಚರ್ಚಗಳಲ್ಲಿ/ಮಸೀದಿಗಳಲ್ಲಿ ಹಾಗೂ ಪ್ರಾರ್ಥನಾ ಸ್ಥಳಗಳಲ್ಲಿ ಚುನಾವಣೆಯ ಕುರಿತು ಯಾವುದೇ ರೀತಿಯ ಪ್ರಚಾರ ಕಾರ್ಯಗಳನ್ನು ಕೈಗೊಳ್ಳತಕ್ಕದ್ದಲ್ಲ.

ಒಂದು ವೇಳೆ ಇದಕ್ಕೆ ತಪ್ಪಿದಲ್ಲಿ ಸಂಬಂಧಿಸಿದವರ ವಿರುದ್ದ ಕಾನೂನು ಪ್ರಕಾರ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!