ಬೆಳಗಾವಿ-೨೪:ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾನುವಾರ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠ ಮತ್ತು ಕಾರಂಜಿ ಮಠಕ್ಕೆ ಭೇಟಿ ನೀಡಿ ಉಭಯ ಶ್ರೀಗಳ ಆಶಿರ್ವಾದ ಪಡೆದರು.
ರುದ್ರಾಕ್ಷಿ ಮಠದ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹಾಗೂ ಕಾರಂಜಿ ಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳಿಗೆ ಗೌರವ ಸಮರ್ಪಣೆ ಮಾಡಿದ ಮೃಣಾಲ ಹೆಬ್ಬಾಳಕರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀಗಳ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.