ಚಿಕ್ಕೊಡಿ-೨೮: ಚಿಕ್ಕೋಡಿ ಲೋಕಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ದಡ್ಡಿ,ನಾಗನೂರ ಹಾಗೂ ಚನ್ಯಾನದಡ್ಡಿ ಚೆಕ್ ಪೋಸ್ಟ್ ಗಳಿಗೆ ಗುರುವಾರದಂದು ಜಿಲ್ಲಾ ಚುನಾವಣಾಧಿಕಾರಿಗಳಾದ ನೀತಿಶ ಪಾಟೀಲ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಆಗಿರುವ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲಿಸ ವರಿಷ್ಠಾಧಿಕಾರಿ ಭೀಮಾಶಂಕರ ಗುಳೆದ ಅವರುಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಸಂಚರಿಸುವ ವಾಹನಗಳನ್ನು ಜಂಟಿಯಾಗಿ ಪರಿಶೀಲಿಸಿ ವೀಕ್ಷಣೆ ನಡೆಸಿ ಅಗತ್ಯದ ಸಲಹೆ ಸೂಚನೆಗಳನ್ನು ನೀಡಿದರು.
ಚೆಕ್ ಪೋಸ್ಟ ಮುಖಾಂತರ ಹಾದು ಹೋಗುವ ಪ್ರತಿಯೊಂದು ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಯಾವುದೇ ಅಕ್ರಮಗಳಿಗೂ ಅವಕಾಶ ನೀಡದಂತೆ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಚೆಕ್ ಪೋಸ್ಟ್ ಗೆ ನೇಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.