23/12/2024
IMG-20240331-WA0000

IMG 20240310 WA0006 -

ಬೆಳಗಾವಿ-೩೧: ಬೆಳಗಾವಿ ಲೋಕಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮೃಣಾಲ ಹೆಬ್ಬಾಳಕರ್ ಕೂಡಲಸಂಗಮ ಪಂಚಮಸಾಲಿ ಮಹಾಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಬಸವಜಯ ಮೃತ್ಯುಂಜಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಹ ಈ ಸಂದರ್ಭದಲ್ಲಿ ಇದ್ದರು.
ಪಂಚಮಸಾಲಿ 2ಎ ಮೀಸಲಾತಿಗಾಗಿ ನಡೆದ ಸುದೀರ್ಘ ಹೋರಾಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಮತ್ತು ಮೃಣಾಲ ಹೆಬ್ಬಾಳಕರ್ ಸಕ್ರೀಯವಾಗಿ ಪಾಲ್ಗೊಂಡಿರುವುದನ್ನು ಸ್ಮರಿಸಿದ ಶ್ರೀಗಳು, ಸಮಾಜಕ್ಕಾಗಿ ಹೆಬ್ಬಾಳಕರ್ ಕುಟುಂಬಕ್ಕಿರುವ ಬದ್ಧತೆಯನ್ನು ಶ್ಲಾಘಿಸಿದರು. ಮುಂದಿನ ದಿನಗಳಲ್ಲಿ ಸಹ ಒಗ್ಗಟ್ಟಾಗಿ ಸಮಾಜದ ಒಳಿತಿಗಾಗಿ ಶ್ರಮಿಸೋಣ ಎಂದು ಹೇಳಿದರು.

error: Content is protected !!