23/12/2024
IMG-20240401-WA0054

ಚಿಕ್ಕೋಡಿ-೦೧: ಚಿಕ್ಕೋಡಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಹಾಲಟ್ಟಿ ಚೆಕ ಪೋಸ್ಟಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ‌ ಪಾಟೀಲ ಅವರು ಅನೀರಿಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು.

ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚೆಕಪೋಸ್ಟಗಳನ್ನು ಸ್ಥಾಪಿಸಲಾಗಿದೆ. ಚಿಕ್ಕೋಡಿ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯ ಹಾಲಟ್ಟಿ ಚೆಕ್ ಪೋಸ್ಟಗೆ ಅನೀರಿಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ ಪಾಟೀಲ ಅವರು ಖುದ್ದಾಗಿ ವಾಹನಗಳ ತಪಾಸಣೆ ನಡೆಸಿ ಚೆಕ್ ಪೋಸ್ಟಗಳ ಮೂಲಕ ಹಾದು ಹೊಗುವ ಪ್ರತಿಯೊಂದು ವಾಹನಗಳನ್ನು‌ ಕುಲಂಕೂಷವಾಗಿ ಪರೀಶಿಲಿಸಬೇಕು ಎಂದು ಚೆಕೆ ಪೋಸ್ಟ ಸಿಬ್ಬಂದಿಗಳಿಗೆ ಸೂಚನೇ ನೀಡಿದರು.

ಚೆಕ್ ಪೋಸ್ಟಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಸಿಬ್ಬಂದಿಗಳು ಜಾಗರೂಕತೆಯಿಂದ‌ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ.ಸಿ.ಇ.ಓ ರಾಹುಲ ಶಿಂಧೆ, ಜಿಲ್ಲಾ‌ ಪೋಲಿಸ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರುಗಳು ಜಿಲ್ಲಾಧಿಕಾರಿಗಳಿಗೆ ಸಾಥ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಶ್ರೀಮತಿ ಮೆಹಬೂಬಿ, ತಹಶೀಲ್ದಾರ ಚಿದಂಬರ ಕುಲಕರ್ಣಿ, ಡಿ.ವೈ.ಎಸ್.ಪಿ. ಗೋಪಾಲಕೃಷ್ಣ ಗೌಡರ ಸೇರಿದಂತೆ ನೋಡೆಲ್ ಅಧಿಕಾರಿಗಳು ಹಾಜರಿದ್ದರು.

ಇದಕ್ಕೂ‌ ಮುನ್ನ ಜಿಲ್ಲಾ ಚುನಾವಣಾಧಿಕಾರಿ ನಿತೇಶ‌ ಪಾಟೀಲ, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಹಾಗೂ ಜಿಲ್ಲಾ‌ಪೋಲಿಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಅವರುಗಳು ಚಿಕ್ಕೋಡಿಯ ಆರ್.ಡಿ.ಹೈಸ್ಕೂಲಿನ ಮತ ಎಣಿಕಾ ಕೇಂದ್ರಕ್ಕೆ ಭೇಟಿ ನೀಡಿ ಸ್ಟ್ರಾಂಗ ರೂಂಗಳ ಭದ್ರತೆಯನ್ನು ಪರಿಶೀಲಿಸಿದರು.

error: Content is protected !!