ಬೆಳಗಾವಿ-೦೨: ನಗರ ವಲಯದ ಸೇಂಟ್ ಝೇವಿಯರ್ಸ್ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷಾ ಕೇಂದ್ರಕ್ಕೆ ಮಂಗಳವಾರ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಶಾಲೆಯಲ್ಲಿ ಅಳವಡಿಸಲಾದ ಸಿಸಿಟಿವಿಯನ್ನು ಪರಿಶೀಲನೆ ನಡೆಸಿದರು. ಬಳಿಕ ಕೊಠಡಿಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆ ಆಗದಂತೆ ಪರೀಕ್ಷೆಗೆ ಅನುಕೂಲ ಮಾಡಬೇಕು. ಯಾವುದೇ ಲೋಪಗಳು ಆಗದಂತೆ ನಿಗಾವಹಿಸುವಂತೆ ಶಿಕ್ಷಕರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಡಿಡಿಪಿಐ ಎಂ.ಎಲ್.ಹಂಚಾಟೆ ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು