ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಯುಕ್ತ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹುದಲಿ ಜಿಲ್ಲಾ ಪಂ ವ್ಯಾಪ್ತಿಯ ರಾಮಾಪೂರ.ಮಾಸ್ತಿಹೊಳಿ.ಹಾಗೂ ಕಬಲಾಪೂರ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾದ ಕಾಂಗ್ರೆಸ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಕಳೆದ 6 ವರ್ಷಗಳಲ್ಲಿ ಬಿಜೆಪಿ ಸಂಸದ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರದ ದುರಾಡಳಿತದಿಂದ ನೊಂದ ಜನರಿಗೆ ನಮ್ಮ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ನೆಮ್ಮದಿ ದೊರಕಿದ್ದು, ನಮ್ಮ ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿ ಸಂಸದರ ವೈಫಲ್ಯಗಳನ್ನು ತಿಳಿಸಲು ಮುಂದಾಗಬೇಕು ಎಂದರು.
ಕಾಂಗ್ರೆಸ್ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಅರಿವು ಮೂಡಿಸುವ ಮಹತ್ತರವಾದ ಜವಾಬ್ದಾರಿ ಮಹಿಳಾ ಮುಖಂಡರು ಹಾಗೂ ಕಾರ್ಯಕರ್ತೆಯರ ಮೇಲಿದೆ ಎಂದ ಅವರು, ದೇಶದ ಭದ್ರ ಬುನಾದಿಗೆ ಯುವಕರು ರಾಜಕೀಯಕ್ಕೆ ಬರಬೇಕಾಗಿದೆ. ಹೀಗಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಸಿಕ್ಕಿದೇ , ಕ್ಷೇತ್ರದ ಜನರ ಸೇವೆ ಮಾಡಲು ಮತದಾರರು ನನಗೆ ಆಶೀರ್ವಾದ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕ ಅರವೀಂದ ಕಾರ್ಚಿ ಹಾಗೂ ಗ್ರಾಮದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.