23/12/2024
IMG-20240403-WA0000

ಬೆಳಗಾವಿ-೦೩: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿರುವ ವಿವಿಧ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗೂ ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯ ಬಾಚಿ ಚೆಕ್ ಪೋಸ್ಟ್ ನಲ್ಲಿ ಕೆಲವೊಂದು ವಾಹನಗಳನ್ನು ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರು ಸ್ವತಃ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಕೆಲವು ಚೆಕ್ ಪೋಸ್ಟ್ ಗಳು ಅಂತರ್ ರಾಜ್ಯದ ಗಡಿಗೆ ಹೊಂದಿಕೊಂಡಿರುವುದರಿಂದ ತೀವ್ರ ನಿಗಾ ವಹಿಸಬೇಕು ಎಂದು ಸೂಚನೆ ನೀಡಿದರು.
ಬೆಳಗಾವಿಯು ಗೋವಾ ಹಾಗೂ ಮಹಾರಾಷ್ಟ್ತ ರಾಜ್ಯಗಳ ಗಡಿಗೆ ಹೊಂದಿಕೊಂಡಿರುವುದರಿಂದ ಅಕ್ರಮ ಮದ್ಯ ಸಾಗಾಣಿಕೆ ಸಾಧ್ಯತೆ ಹೆಚ್ಚಾಗಿರುತ್ತದೆ. ಇದಲ್ಲದೇ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮವಾಗಿ ಹಣ ಹಾಗೂ ವಸ್ತುಗಳ ಸಾಗಾಣಿಕೆ ಮೇಲೆಯೂ ಕಣ್ಣಿಡಬೇಕು ಎಂದು ಹೇಳಿದರು.
ಪ್ರತಿಯೊಂದು ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಸಿಬ್ಬಂದಿ ಕಡ್ಡಾಯವಾಗಿ ಉಪಸ್ಥಿತರಿದ್ದು, ತಪಾಸಣೆ ನಡೆಸಬೇಕು ಎಂದು ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಚೆಕ್ ಪೋಸ್ಟ್ ಗಳಲ್ಲಿ ನಿಯೋಜಿಸಲಾಗಿರುವ ತಂಡದ ಅಧಿಕಾರಿ/ಸಿಬ್ಬಂದಿ ಕಡ್ಡಾಯವಾಗಿ ತಮ್ಮ ಗುರುತಿನಚೀಟಿ ಧರಿಸಬೇಕು; ಪ್ರತಿಯೊಂದು ವಾಹನ‌ ತಪಾಸಣೆಯ ಕುರಿತು ರಿಜಿಸ್ಟರ್ ನಲ್ಲಿ ನಮೂದಿಸಬೇಕು; ವಾಹನ ತಪಾಸಣೆ ಮಾಡುವಾಗ ಸೌಜನ್ಯದಿಂದ ವರ್ತಿಸುವುದರ ಜತೆಗೆ ತಮ್ಮ ಸುರಕ್ಷತೆ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

error: Content is protected !!