ಬೆಳಗಾವಿ-೦೩: ನಗರದಲ್ಲಿ ಬುಧವಾರ ನಡೆದ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರು ಹಾಗೂ ಮಾಜಿ ದೇವದಾಸಿಯರಿಂದ ಮತದಾನದ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ನಗರದ ಚನ್ನಮ್ಮ ವೃತ್ತದಲ್ಲಿ ಜಾಗೃತಿ ಜಾಥಾಗೆ ಚಾಲನೆ ನೀಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಲಿಂಗತ್ವ ಅಲ್ಪ ಸಂಖ್ಯಾತರು ಕೂಡಾ ಮತದಾನದಿಂದ ದೂರುಳಿಯದೇ ಮತದಾನದಲ್ಲಿ ಭಾಗಿಯಾಗಬೇಕು. ಪ್ರಜಾಪ್ರಭುತ್ವ ಹಬ್ಬವಾಗಿ ಚುನಾವಣೆಯಲ್ಲಿ ನಿಮ್ಮ ನಾಯಕನನ್ನು ಆಯ್ಕೆ ಮಾಡಲು ತಪ್ಪದೇ ಮತದಾನ ಮಾಡಬೇಕು. ನಗರ ಪ್ರದೇಶದಲ್ಲಿ ಕಡಿಮೆ ಮತದಾನವಾಗುತ್ತಿದೆ. ಪ್ರಜ್ಞಾವಂತರು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ತಿಳಿಸಿದರು.
ಜಾಗೃತಿ ಜಾಥಾ: ನಗರದ ಚನ್ನಮ್ಮ ವೃತ್ತದಲ್ಲಿ ಪ್ರಾರಂಭವಾದ ಮತದಾನದ ಜಾಗೃತಿ ಜಾಥಾವೂ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನ ವನದ ರಸ್ತೆಯ ಮೂಲಕ ಕೃಷ್ಣದೇವರಾಯ ವೃತ್ತದಿಂದ ಮಹಾನಗರ ಪಾಲಿಕೆವರೆಗೆ ಜಾಥಾ ನಡೆಯಿತು. ಸುಮಾರು ಮೂನ್ನುರಕ್ಕು ಹೆಚ್ಚು ಜನರಿಂದ ಜಾಥಾ ಉದ್ದಕ್ಕೂ ಮತದಾನದ ಘೊಷಣೆ ಕೂಗುವುದು, ಜಾಗೃತಿ ಫಲಕಗಳ ಮೂಲಕ ಸಾರ್ವಜನಿಕರಲ್ಲಿ ಮತದಾನದ ಅರಿವು ಮೂಡಿಸಿದರು.
ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಡಾ: ಎಮ್ ಕೃಷ್ಣರಾಜು, ಲೆಕ್ಕಾಧಿಕಾರಿ ಗಂಗಾ ಹಿರೆಮಠ, ಮಹಾನಗರ ಪಾಲಿಕೆ ಆಯುಕ್ತರಾದ ಲೊಕೇಶ ಪಿ.ಎನ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್. ನಾಗರಾಜ್ ಯುವಸಬಲೀಕರಣ ಮತ್ತು ಕ್ರಿಡಾ ಇಲಾಖೆ ಉಪ ನಿರ್ದೇಶಕರಾದ ಬಿ. ಶ್ರೀನಿವಾಸ, ನಗರ ಸಿ.ಡಿ.ಪಿಓ ರಾಮಮುರ್ತಿ ಕೆ.ವಿ , ಗ್ರಾಮೀಣ ಸಿ.ಡಿ.ಪಿ.ಓ ಸುಮಿತ್ರಾ ಡಿ.ಬಿ, ಮಹಿಳಾ ಅಭಿವೃದ್ಧಿ ನಿಗಮ ನಿರಿಕ್ಷಕಿ ರೂಪಾ ಪವಾರ ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.