23/12/2024

ಬೆಳಗಾವಿ-೦೮: ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಮತದಾನ ಜಾಗೃತಿ ಮೂಡಿಸುವ ಉದ್ದೇಶದಿಂದ ರಂಗೋಲಿ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.

ಹೈಸ್ಕೂಲ್ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ರಂಗೋಲಿ ಹಾಗೂ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಹೈಸ್ಕೂಲ್ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಭಾಗವಹಿಸಿದರು. ಪಿಯುಸಿ ವಿಭಾಗದಲ್ಲಿ 14 ವಿದ್ಯಾರ್ಥಿಗಳು ಪಾಲ್ಗೊಂಡರು.

ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆಯ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಅತ್ಯುತ್ಯಮವಾಗಿ ರಂಗೋಲಿ ಹಾಗೂ ಚಿತ್ರಕಲೆ ಬಿಡಿಸಿದ ವಿದ್ಯಾರ್ಥಿಗಳಿ ಹೈಸ್ಕೂಲ್ ಹಾಗೂ ಪಿಯುಸಿ ವಿಭಾಗದಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಸ್ವೀಪ್ ಕಮಿಟಿಯಿಂದ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಲೆಕ್ಕಾಧಿಕಾರಿ ಗಂಗಾ ಹಿರೇಮಠ, ಡಿ.ಡಿ.ಪಿಯು ಮಹಾದೇವ ಎಮ್ ಕಾಂಬಳೆ, ಪಿ.ಯು ನೋಡಲ್ ಅಧಿಕಾರಿ ಎಮ್. ಎ. ಮುಲ್ಲಾ, ಬೆಳಗಾವಿ ವಿಭಾಗ ತಾಲ್ಲೂಕಿನ ನೋಡಲ್ ಅಧಿಕಾರಿಗಳು ಹಾಗೂ ಮಕ್ಕಳ ಪಾಲಕರು ಉಪಸ್ಥಿತರಿದ್ದರು.

error: Content is protected !!