ಬೆಳಗಾವಿ-೧೧:ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಗರದ ಸಿದ್ಧರಾಮೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಫಲಿತಾಂಶವು ಶೇ. 85 ರಷ್ಟಾಗಿದ್ದು, ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಮಠದ 98% ಫಲಿತಾಂಶದೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಗಣಿತ ವಿಷಯದಲ್ಲಿ 100ಕ್ಕೆ 100 ಅಂಕಗಳಿಸಿರುವ ಇವಳ ಸಾಧನೆಯನ್ನು ಎಡೆಯೂರು ಡಂಬಳ ಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ, ಸಂಸ್ಥೆಯ ಕಾರ್ಯದರ್ಶಿ ಕೆ.ಬಿ. ಹಿರೇಮಠ, ಪ್ರಾಚಾರ್ಯ ಸ್ವಪ್ನಾ ಜೋಶಿ, ದೈಹಿಕ ನಿರ್ದೇಶಕ ಪ್ರಭು ಶಿವನಾಯಕರ ಸೇರಿದಂತೆ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.