ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಖಡಕಲಾಟ ಗ್ರಾಮದಲ್ಲಿ ಚಿಕ್ಕೋಡಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾದ ಪ್ರಿಯಾಂಕಾ ಜಾರಕಿಹೊಳಿ ಪರ ಚುನಾವಣಾ ಪ್ರಚಾರರ್ಥ್ ಪ್ರಕಾಶ ಹುಕ್ಕೇರಿ ಅವರ ನೇತೃತ್ವದಲ್ಲಿ ಖಡಕಲಾಟ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ,ನಮ್ಮ ತಂದೆ ಸತೀಶ ಜಾರಕಿಹೊಳಿ ಹಾಗೂ ನಾಯಕರಾದ ಪ್ರಕಾಶ ಹುಕ್ಕೇರಿ ಅವರ ಮಾರ್ಗದರ್ಶನದಲ್ಲಿ ಲೋಕಸಭಾ ಕ್ಷೇತ್ರದ ಅಭಿವೃದ್ಧಿ ಮಾಡುವೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕಕ್ಕೆ ಬಂದಲ್ಲಿ ಗ್ಯಾರಂಟಿ ಯೋಜನೆಗಳು ಇಮ್ಮಡಿಯಾಗಲಿವೆ ಕಾರಣ ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನನ್ನನ್ನು ಗೆಲ್ಲಿಸಿ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ರೈತರಿಗೆ ಭರವಸೆಯನ್ನು ನೀಡಿದ್ದರು. ರೈತರ ಆದಾಯ ಹೆಚ್ಚು ಆಗಿಲ್ಲ. ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಬಿಜೆಪಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ. ನಮ್ಮ ಸರ್ಕಾರ ರೈತರ ಹಾಗೂ ಬಡ ಜನರ ಪರ ಇದ್ದು ಅವರ ಕಷ್ಟಗಳಿಗೆ ಸ್ಪಂದಿಸಿ ವಿವಿಧ ಯೋಜನೆಗಳನ್ನು ಜಾರಿ ಮಾಡಿ ನುಡಿದಂತೆ ನಡೆದ ಪಕ್ಷ ಎಂದು ತೋರಿಸಿದೆ ಎಂದು ಹೇಳಿದರು.
ಕಳೆದ 15 ವರ್ಷದಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ತಂದೆ ಸತೀಶ ಜಾರಕಿಹೊಳಿ ಅವರು ತಮ್ಮ ಮತಕ್ಷೇತ್ರದ ಗ್ರಾಮಗಳಲ್ಲಿ ಬೇಡಿಕೆಗೆ ಅನುಗುಣವಾಗಿ ಶಾಲಾ ಕಾಲೇಜುಗಳನ್ನು ನಿರ್ಮಿಸಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ನನಗೂ ಇದೇ ರೀತಿಯಲ್ಲಿ ಜನರ ಸೇವೆ ಮಾಡುವ ಬಯಕೆಯಿದೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಸ್ವಚ್ಛ ಆಡಳಿತ ನೀಡಿದೆ. ಹೀಗಾಗಿ ಈ ಬಾರಿ ಕಾರ್ಯಕರ್ತರು ಕಾಂಗ್ರೆಸ್ ಪಂಚ ಗ್ಯಾರಂಟಿಗಳನ್ನು ಮನೆ ಮನೆಗೆ ತಿಳಿಸಿ ಈ ಚುನಾವಣೆಯಲ್ಲಿ ನನಗೆ ಹೆಚ್ಚು ಮತ ನೀಡುವಂತೆ ಮಾಡಬೇಕು. ಈ ಚುನಾವಣೆಯಲ್ಲಿ ನಾನು ಗೆದ್ದರೆ ರಾಜ್ಯದಲ್ಲಿ ಸಿಎಂ, ಜಿಲ್ಲಾ ಮಂತ್ರಿಯಾಗಿ ನಮ್ಮ ತಂದೆಯವರು ಹಾಗೂ ಚಿಕ್ಕೋಡಿ ಕ್ಷೇತ್ರದಲ್ಲಿ ಪ್ರಕಾಶ ಹುಕ್ಕೇರಿ-ಗಣೇಶ ಹುಕ್ಕೇರಿ ಸೇರಿದಂತೆ ನಾನು ಸೇರಿ 5 ಇಂಜನ್ ಶಕ್ತಿಯಷ್ಟು ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಬರಲಿದೆ. ಆದ್ದರಿಂದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಡಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಪಕ್ಷ 2013ರಲ್ಲಿ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ಪ್ರಣಾಳಿಕೆಯಲ್ಲಿ 165 ಭರವಸೆಗಳನ್ನು ನೀಡಿತು 158 ಭರವಸೆಗಳನ್ನು ಈಡೇರಿಸಿದೆ. ಅನ್ನಭಾಗ್ಯ, ಕ್ಷೀರಭಾಗ್ಯ, ಶೂ ಭಾಗ್ಯ, ರೈತರ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಹಾಗೂ ವಿದ್ಯಾಸಿರಿ ಯೋಜನೆಗಳನ್ನು ಈಡೇರಿಸಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂಬತ್ತು ತಿಂಗಳ ಒಳಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದೆ. ಪ್ರತಿಯೊಂದು ಕುಟುಂಬಗಳಿಗೆ ನಾಲ್ಕರಿಂದ ಐದು ಸಾವಿರ ಹಣ ಉಳಿತಾಯವಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿಯೊಂದು ಮನೆಯ ಗೃಹಿಣಿಯರು 2000 ಪಡೆದುಕೊಳ್ಳುತ್ತಿದ್ದಾರೆ. ವಿಧ್ಯುತ್ ಅನ್ನು ಉಚಿತವಾಗಿ ಪಡೆದುಕೊಳ್ಳುತ್ತಿದ್ದಾರೆ. ಶಕ್ತಿ ಯೋಜನೆಯಡಿ ಉಚಿತವಾಗಿ ಮಹಿಳೆಯರು ಪ್ರಯಾಣ ಮಾಡುತ್ತಿದ್ದಾರೆ. ಅನ್ನಭಾಗ್ಯದಲ್ಲಿ 5 ಕೆಜಿ ಅಕ್ಕಿ 5 ಕೆ.ಜಿ ಗೆ ಹಣವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಈ ಬಾರಿ ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ ಗೆ ಮತ ನೀಡುವಂತೆ ಮನೆ ಮನೆಗೆ ತೆರಳಿ ಕಾರ್ಯಕರ್ತರು ಕೈ ಸಾಧನೆ ತಿಳಿಹೇಳಬೇಕು ಎಂದರು.
ಈ ವೇಳೆ ಎಂಎಲ್ ಸಿ ಪ್ರಕಾಶ ಹುಕ್ಕೇರಿ ಮಾತನಾಡಿ, ನಾನೂ ಕೂಡಾ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಹೀಗಾಗಿ ಮತದಾರರು ತಪ್ಪು ಹೆಜ್ಜೆ ಇಡುವ ಮೊದಲು ಕಾಂಗ್ರೆಸ್ ಪಕ್ಷ ಮಾಡಿರುವ ಸಾಧನೆಗಳ ಕುರಿತು ಒಮ್ಮೆ ಅವಲೋಕನ ಮಾಡಿ ನಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಮುಂದಾಗಬೇಕು. ನಮ್ಮ ಕ್ಷೇತ್ರದ ಮತದಾರರಿಂದ ಮಾತ್ರ ಪ್ರಕಾಶ ಹುಕ್ಕೇರಿ- ಗಣೇಶ ಹುಕ್ಕೇರಿ ಈ ಮಟ್ಟಕ್ಕೆ ಬರಲು ಸಾಧ್ಯವಾಗಿದೆ ಹೊರತು ನಮ್ಮಿಂದಲೇ ಈ ಮಟ್ಟಕ್ಕೆ ಬರಲು ಸಾಧ್ಯವಿಲ್ಲ ಎಂದ ಅವರು. 38 ವರ್ಷ ನಿರಂತರ ಪ್ರಾಮಾಣಿಕವಾಗಿ ನಿಮ್ಮ ಸೇವೆ ಮಾಡಿದ್ದರಿಂದ ನೀವು ನಿರಂತರ ನಮ್ಮನ್ನೇ ಆಯ್ಕೆ ಮಾಡುವ ಮೂಲಕನಿಮ್ಮ ಪ್ರಾಮಾಣಿಕ ದೊಡ್ಡ ಗುಣವನ್ನು ನಮಗೆ ತೋರಿಸಿದ್ದಿರಿ. ಇನ್ನೋಮ್ಮೇ ಈ ಕ್ಷೇತ್ರದ ಅಭಿವೃದ್ಧಿಗೆ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಹೆಚ್ಚು ಮರತ ನೀಡಲು ಮುಂದಾಗಬೇಕು ಎಂದರು.
ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಕೇವಲ ನಮ್ಮ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಪುತ್ರಿ ಅಲ್ಲ. ನಮ್ಮ ಚಿಕ್ಕೋಡಿ ಸದಲಗಾ ಮತಕ್ಷೇತ್ರದ ಮನೆ ಮಗಳು. ಹೀಗಾಗಿ ಸತೀಶ ಜಾರಕಿಹೊಳಿ ಅವರ ಆಶಯದಂತೆ, ಪಕ್ಷದ ಗೆಲುವಿಗಾಗಿ ವಿಧಾನಸಭೆ ಚುನಾವಣಾ ಮಾದರಿಯಲ್ಲಿ ಶಾಸಕರಾದ ಗಣೇಶ ಹುಕ್ಕೇರಿ ಅವರ ನೇತೃತ್ವದಲ್ಲಿ ಪ್ರತಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ತಿಳಿಸಿ ಹೆಚ್ಚಿನ ಅಂತರದಿಂದ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಕರೆ ನೀಡಿದರು.
ಈ ಸಭೆಯಲ್ಲಿ ಮಾಜಿ ಶಾಸಕರಾದ ಕಾಕಾಸಾಬ ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪಂಚಾಯತ್ ಸದಸ್ಯರಾದ ಸತೀಶ ಪಾಟೀಲ, ವಿನೋದ ಕಾಗೆ, ನಾಸಿರ ತಹಸೀಲ್ದಾರ, ರಾಕೇಶ ಚಿಂಚಣೆ, ಮಾಣಿಕ ಪಾಟೀಲ, ಭೀಮಾ ಉಡಗಟ್ಟಿ, ಭೀಮಾ ಖಂಚನಾಳೆ, ಜಿತೇಂದ್ರ ಪಾಟೀಲ, ಪ್ರಮೋದ ಪಾಟೀಲ, ರೋಹಿತ ಯಾದವ ಹಾಗೂ ನವಲಿಹಾಳ, ಖಡಕಲಾಟ, ಚಿಂಚಣಿ, ಕೋಥಳಿ, ಚಿಕ್ಕಲವಾಳ ಹಾಗೂ ಶಿರಗಾಂವ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಹಾಜರಿದ್ದರು.