23/12/2024
IMG-20240414-WA0000

ಬೆಳಗಾವಿ-೧೪ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಚುನಾವಣಾ ಖರ್ಚು-ವೆಚ್ಚದ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ವೆಚ್ಚ ನಿರ್ವಹಣೆ, ಎಸ್.ಆರ್. ದರಗಳ ನಿಗದಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗಿದೆ.
ಬ್ಯಾಂಕರುಗಳ ಸಭೆಯನ್ನು ನಡೆಸಿ ಸಂಶಯಾಸ್ಪದ ವ್ಯವಹಾರಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ತಿಳಿಸಲಾಗಿದ್ದು, ಡಿಜಿಟಲ್ ಸೇರಿದಂತೆ ಪ್ರತಿಯೊಂದು ಬ್ಯಾಂಕು ವ್ಯವಹಾರಗಳ ಮೇಲೆ ನಿಗಾ ವಹಿಸಲಾಗಿದೆ.
ಪ್ರಿಂಟಿಂಗ್ ಪ್ರೆಸ್ ಮಾಲೀಕರ ಸಭೆ ಕೂಡ ನಡೆಸುವ ಮೂಲಕ ಅಗತ್ಯ ತಿಳಿವಳಿಕೆ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು.

ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳಿಗೆ ಕನಿಷ್ಠ ಮೂರು ಎಫ್.ಎಸ್.ಟಿ. ತಂಡಗಳಂತೆ 28 ತಂಡಗಳನ್ನು ಹಾಗೂ 28 ಎಸ್.ಎಸ್.ಟಿ ಹಾಗೂ 25 ವಿಎಸ್ ಟಿ ತಂಡಗಳು ಕಾರ್ಯನಿರ್ವಹಿಸುತ್ತಿವೆ.
ಅಕ್ರಮ ಹಣ, ಮದ್ಯ ಮತ್ತಿತರ ವಸ್ತುಗಳ ಸಾಗಾಣಿಕೆ ಮೇಲೆ ನಿಗಾ ವಹಿಸಲಾಗಿದೆ. ಆದಾಯ ತೆರಿಗೆ, ವಾಣಿಜ್ಯ ತೆರಿಗೆ, ಅಬಕಾರಿ ಹಾಗೂ ಪೊಲೀಸ್ ಸೇರಿದಂತೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಮತ್ತು ತಂಡಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ನಿತೇಶ್ ಪಾಟೀಲ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಹರಕ್ರಿಪಾಲ್ ಖಟಾನಾ, ಕೆಲವು ಚೆಕ್‌ ಪೋಸ್ಟ್ ಗಳಿಗೆ ಭೇಟಿ ನೀಡಿ‌ ಪರಿಶೀಲಿಸಲಾಗಿದ್ದು, ವಾಹನದಟ್ಟಣೆ‌ಹೆಚ್ಚಾಗಿರುವ ಕಡೆಗಳಲ್ಲಿ ಹೆಚ್ಚುವರಿ ಸಿಬ್ಬಂದಿ ನಿಯೋಜಿಸುವಂತೆ ತಿಳಿಸಿದರು.
ಪೇಡ್ ನ್ಯೂಸ್ ಸೇರಿದಂತೆ ಪ್ರತಿಯೊಂದು ವೆಚ್ಚದ ಮೇಲೆ ನಿಗಾ ವಹಿಸಬೇಕು ಎಂದು ತಿಳಿಸಿದರು.
ಸಹಾಯಕ ವೆಚ್ಚ ನೋಡಲ್ ಅಧಿಕಾರಿಗಳು ಹಾಗೂ ಪ್ರತಿಯೊಂದು ತಂಡದ ಕುರಿತು ಸಭೆಯಲ್ಲಿ ಮಾಹಿತಿಯನ್ನು ಪಡೆದುಕೊಂಡರು.

ಇನ್ನೋರ್ವ ವೆಚ್ಚ ವೀಕ್ಷಕರಾದ ನರಸಿಂಗ್ ರಾವ್ ಬಿ. ಡಿಸಿಪಿ ರೋಹನ್ ಜಗದೀಶ್, ಪ್ರೊಬೇಷನರಿ ಐ.ಎ..ಎಸ್. ಅಧಿಕಾರಿ ಶುಭಂ ಶುಕ್ಲಾ ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ತರಬೇತಿ ನೋಡಲ್ ಅಧಿಕಾರಿ ಶಂಕರಾನಂದ ಬನಶಂಕರಿ, ಸಹಾಯಕ ಚುನಾವಣಾಧಿಕಾರಿಗಳಾದ ಪಿ.ಎನ್.ಲೋಕೇಶ್, ಸತೀಶ್ ಕುಮಾರ್, ಪ್ರಭಾವತಿ ಫಕ್ಕೀರಪುರ, ಡಾ.ರಾಜೀವ್ ಕೂಲೇರ್, ರಾಜಶ್ರೀ ಜೈನಾಪುರ, ವೆಚ್ಚ ವೀಕ್ಷಕ ನೋಡಲ್ ಅಧಿಕಾರಿ ಗೌರಿಶಂಕರ ಕಡೇಚೂರ, ಎಂಸಿಎಂಸಿ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಸೇರಿದಂತೆ ವಿವಿಧ ತಂಡಗಳ ಮುಖ್ಯಸ್ಥರು ಸಭೆಯಲ್ಲಿ ಹಾಜರಿದ್ದರು.

error: Content is protected !!