ಬೆಳಗಾವಿ-೧೪:ಮಾಜಿ ವಿಧಾನ ಪರಿಷತ್ ಸದಸ್ಯೆ ಸುನಂದಾ ಲಿಂಗನಗೌಡ ಪಾಟೀಲ (71)ಅವರು ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ 14/04/2024 ಬೆಳಿಗ್ಗೆ ನಿಧನರಾಗಿದ್ದಾರೆ. ಮೂಲತಃ ಹಿರೇ ಬಾಗೇವಾಡಿ ಗ್ರಾಮದವರಾದ ಇವರು ಒಂದು ಬಾರಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾಗಿ ಹಾಗೂ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರ ಅಂತ್ಯಸಂಸ್ಕಾರವನ್ನು ಸಂಜೆ ಹಿರೇ ಬಾಗೇವಾಡಿ ಗ್ರಾಮದ ತೋಟದ ಮನೆಯಲ್ಲಿ ನೆರವೇರಿಸಲಾಗುವುದು.ಮೃತರಿಗೆ ಪುತ್ರಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗ ಇದೆ.