ಬೆಳಗಾವಿ-೧೪:ಬುದ್ಧಂ ಶರಣಂ ಗಚ್ಛಾಮಿ… ಡಾ.ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಸದಾಶಿವ ನಗರದ ಬುದ್ಧವಿಹಾರದ ಆವರಣದಲ್ಲಿರುವ ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಭಾನುವಾರ ಮಾಲಾರ್ಪಣೆ ಮಾಡಿದ ಬಳಿಕ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತಿ ಸಿಇಓ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಮತ್ತಿತರರು ಬುದ್ಧವಿಹಾರದಲ್ಲಿ ಬುದ್ಧ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಪ್ರಾರ್ಥನೆ ಸಲ್ಲಿಸಿದರು.
ಮಹಾನಗರ ಪಾಲಿಕೆ ಆಯುಕ್ತರಾದ ಪಿ.ಎನ್.ಲೋಕೇಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನವೀನ್ ಶಿಂತ್ರೆ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ಸಮಾಜದ ಮುಖಂಡರು ಉಪಸ್ಥಿತರಿದ್ದರು.