ಬೆಂಗಳೂರು-೧೬: ಕನ್ನಡ ಚಿತ್ರರಂಗದ ಹಿರಿಯ ಖ್ಯಾತ ಹಾಸ್ಯನಟ,ನಿರ್ದೇಶಕ ದ್ವಾರಕೀಶ ಅವರು ಮಂಗಳವಾರ ವಿಧಿವಶರಾದರು.
ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ದ್ವಾರಕೀಶ ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ಅವರ ಮನೆಯಲ್ಲಿ ನಿಧನರಾಗಿದ್ದಾರೆ. ಹಾಸ್ಯ ನಟರಾಗಿ, ನಾಯಕರಾಗಿ ಗುರುತಿಸಿಕೊಂಡಿದ್ದ ದ್ವಾರಕೀಶ್ ಸಿನಿಮಾ ನಿರ್ಮಾಣದಲ್ಲಿಯೂ ಹೊಸ ಹೊಸ ಸಾಹಸ ಮಾಡಿದವರು. ಕನ್ನಡ ಚಿತ್ರರಂಗದಲ್ಲಿಯೇ ಮೊದಲ ಸಾರಿ ವಿದೇಶಕ್ಕೆ ತೆರಳಿ ಸಿಂಗಾಪುರದಲ್ಲಿ ರಾಜಾಕುಳ್ಳ ಸಿನಿಮಾ ಶೂಟಿಂಗ್ ಮಾಡಿಕೊಂಡು ಬಂದಿದ್ದರು. ದ್ವಾರಕೀಶ್ ನಿಧನಕ್ಕೆ ಚಿತ್ರರಂಗದ ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.