23/12/2024
oppo_2

oppo_2

ಚಿಕ್ಕೋಡಿ-೧೭: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಅಗತ್ಯ ಸೇವೆಗಳಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಮತದಾನ ದಿನದಂದು ಕಾರ್ಯನಿರ್ವಹಿಸುವ ಚುನಾವಣಾ ಸಿಬ್ಬಂದಿಗಳು ಮತದಾನದಿಂದ ವಂಚಿತರಾಗದಂತೆ ಅಗತ್ಯದ ಕ್ರಮಕೈಗೊಳ್ಳಲು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿ.ಇ.ಓ. ಆದ ರಾಹುಲ ಶಿಂಧೆ ಅವರು ಸೂಚನೆ ನೀಡಿದರು.
ಚಿಕ್ಕೋಡಿ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಂದು ಜರುಗಿದ ಸಹಾಯಕ ಚುನಾವಣಾಧಿಕಾರಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಗತ್ಯ ಸೇವೆಗಳಡಿ ಹಾಗೂ ಮತದಾನದ ದಿನದಂದು ಕಾರ್ಯನಿರ್ವಹಿಸುವ ಪ್ರತಿಯೊಬ್ಬ ಅಧಿಕಾರಿ ಸಿಬ್ಬಂದಿಗಳಿಗೆ ವಿತರಿಸಲಾದ ನಿಗದಿತ ನಮೂನೆಗಳನ್ನು ಕ್ರೋಢಿಕರಿಸಿ ಸಿಬ್ಬಂದಿಗಳಿಗೆ ನಿಗದಿಪಡಿಸಲಾದ ದಿನಾಂಕದಂದು ಮತದಾನಕ್ಕೆ ವ್ಯವಸ್ಥೆ ಕಲ್ಪಿಸಬೇಕು. ಈ ಪ್ರಕ್ರಿಯೆಯಲ್ಲಿ ಯಾವೊಬ್ಬ ಅಧಿಕಾರಿ ಸಿಬ್ಬಂದಿ ಮತದಾನದಿಂದ ವಂಚಿತರಾಗದಂತೆ ನಿಗಾವಹಿಸಲು ಅವರು ತಿಳಿಸಿದರು.
ಎಂಭೈತ್ತೆöÊದು ವರ್ಷ ಮೇಲ್ಪಟ್ಟ ವಯೋವೃದ್ಧರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಗುರುತಿಸಲಾದ ಎಂಭೈತ್ತೆöÊದು ವರ್ಷ ಮೇಲ್ಪಟ್ಟವರಿಗೆ ನಿಗದಿತ ವೇಳಾಪಟ್ಟಿಯಂತೆ ಮತದಾನ ಪ್ರಕ್ರಿಯೆ ಕೈಗೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಮತದಾನಕ್ಕೆ ಅಗತ್ಯದ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಮನೆ ಮನೆಗೆ ಮತದಾನ ಪ್ರಕ್ರಿಯೆಗೆ ಬೇಕಾದ ಸಿಬ್ಬಂದಿ, ವಾಹನ, ಹಾಗೂ ಬೇಕಾದಂತಹ ಸಾಮಗ್ರಿಗಳ ವಿವರಗಳನ್ನು ಒದಗಿಸುವಂತೆ ತಿಳಿಸಿದ ಅವರು ಈ ಪ್ರಕ್ರಿಯೆಗೆ ನಿಯೋಜಿತ ಎಲ್ಲ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಗುರುತಿನ ಚೀಟಿ ಹಾಗೂ ಸಮವಸ್ತçದ ವ್ಯವಸ್ಥೆ ಮಾಡಬೇಕು.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಗುರುತಿಸಲಾಗುವ ಸೂಕ್ಷö್ಮ ಹಾಗೂ ಅತೀ ಸೂಕ್ಷö್ಮ ಮತಗಟ್ಟೆಗಳ ವ್ಯಾಪ್ತಿಯಲ್ಲಿನ ಮತದಾರರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಲು ಹೆಚ್ಚಿನ ಸ್ವೀಪ್ ಚಟುವಟಿಕೆ, ಪೋಲಿಸ್ ಇಲಾಖೆಯಿಂದ ಪಥಸಂಚಲನ ಆಯೋಜಿಸಬೇಕು ಈ ಕುರಿತು ಈಗಿನಿಂದಲೇ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ರೂಪುರೇಷೆಗಳನ್ನು ತಯಾರಿಸಲು ತಿಳಿಸಿದರು.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು ವಾಹನಗಳ ಕುರಿತು ಅನುಮತಿ ಕೋರಿ ಸಲ್ಲಿಸುವ ಅರ್ಜಿಗಳ ಕುರಿತು ಕುಲಂಕೂಷವಾಗಿ ಪರಿಶೀಲಿಸಿ ಅನುಮತಿ ನೀಡುವದು. ಅಲ್ಲದೇ ಅನುಮತಿ ನೀಡಿದರ ವೆಚ್ಚದ ಮಾಹಿತಿಯನ್ನು ಕೂಡಲೇ ನೀಡಬೇಕು.
ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ಜರುಗಿಸುವ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ರಚಿಸಲಾದ ಎಫ್.ಎಸ್.ಟಿ ಹಾಗೂ ಎಸ್.ಎಸ್.ಟಿ ತಂಡಗಳು ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸುವದರ ಮೂಲಕ ಚುನಾವಣಾ ಅಕ್ರಮಗಳನ್ನು ನಿಯಂತ್ರಿಸಬೇಕು. ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಚೆಕ್ ಪೋಸ್ಟಗಳಿಗೆ ನಿಯಮಿತವಾಗಿ ಭೇಟಿ ನೀಡುವದು ಹಾಗೂ ಸ್ಟಾçಂಗ್ ರೂಂಗಳಿಗೆ ಭೇಟಿ ನೀಡಿ ಅಲ್ಲಿನ ಭದ್ರತೆ ಬಗ್ಗೆ ನಿಯಮಿತವಾಗಿ ಪರಿಶೀಲಿಸುವಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ ಶಿಂಧೆ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಭೆಯಲ್ಲಿ ಚುನಾವಣಾಧಿಕಾರಿಗಳ ಕಚೇರಿಯ ಸಹಾಯ ಚುನಾವಣಾಧಿಕಾರಿ ಬಸವರಾಜ ಅಡವಿಮಠ ಸೇರಿದಂತೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಹಾಜರಿದ್ದರು.
error: Content is protected !!