ಚಿಕ್ಕೋಡಿ-೧೭: ಲೋಕಸಭಾ ಸಾರ್ವತ್ರಿಕ ಚುನಾವಣಾ ಅಕ್ರಮಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಚೆಕಪೋಸ್ಟಗಳನ್ನು ಸ್ಥಾಪಿಸಲಾಗಿದ್ದು ಬುಧವಾರ ರಂದು ಹಾಲಟ್ಟಿ ಚೆಕಪೋಸ್ಟಗೆ ಅವರು ಭೇಟಿ ನೀಡಿ ಪರಿಶೀಲಿಸಿದರು.
ಚೆಕಪೋಸ್ಟನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳಿ0ದ ಮಾಹಿತಿ ಪಡೆದ ಅವರು ಚೆಕಪೋಸ್ಟನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಸಿಬ್ಬಂದಿಗಳು ತಮ್ಮ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು, ಚುನಾವಣಾ ಕರ್ತವ್ಯ ಅತ್ಯಂತ ಜವಾಬ್ದಾರಿಯುತ ಕಾರ್ಯವಾಗಿದ್ದು ಈ ಕಾರ್ಯದಲ್ಲಿ ಯಾವುದೇ ಉದಾಸೀನ, ಅಜಾಗರೂಕತೆ ಹಾಗೂ ಲೋಪಗಳು ಕಂಡುಬ0ದಲ್ಲಿ ಸಂಬ0ಧಿಸಿದ ಅಧಿಕಾರಿ, ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವದು ಎಂದು ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿಗಳಾದ ರಾಹುಲ ಶಿಂಧೆ ಅವರು ಖಡಕ್ ಸೂಚನೆ ನೀಡಿದರು.