ಯಮಕಣಮರಡಿ ಕ್ಷೇತ್ರವನ್ನು ಈಗಾಗಲೇ ಅಭಿವೃದ್ದಿಯತ್ತ ಕೊಂಡೊಯ್ಯಲಾಗುತ್ತಿದೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಂತ ಪಕ್ಷ. ದೇಶಕ್ಕೆ ವಿದ್ಯುತ್, ಟಿವಿ, ಬಡವರಿಗೆ ಭೂಮಿ ನೀಡಿದ್ದು ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನೀಡಿದೆ. ಹಾಗಾಗಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದರೆ ಬಡವರಿಗೆ ಅನುಕೂಲವಾಗಲಿದೆ ಎಂದರು.
ಕೇಂದ್ರದಲ್ಲಿ ಹತ್ತು ವರ್ಷಗಳಿಂದ ಬಿಜೆಪಿ ಕೊಟ್ಟ ಭರವಸೆ ಜಾರಿ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶದ ಪ್ರತಿ ಮಹಿಳೆಯರಿಗೆ ೧ ಲಕ್ಷ ಕೊಡ್ತೇವೆ ಎಂದು ಈಗಾಗಲೇ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಬಡವರ ದಲಿತರ ಬಗ್ಗೆ ಇರುವ ಕಾಳಜಿ ಎಂದರು.
ಈ ಬಾರಿ ಮತದಾರರು ಇಡಿ ಕ್ಷೇತ್ರ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಗೆ ಬೆಂಬಲ ನೀಡುವ ಮೂಲಕ ನನಗೆ ತಮ್ಮ ಅಮೂಲ್ಯವಾದ ನೀಡಬೇಕು. ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ನಿಮ್ಮ ಮನೆ-ಮಗಳನ್ನು ಕೈ ಹಿಡಿದು ನಡೆಸುವ ಜವಾಬ್ದಾರಿ ನಿಮ್ಮ ಮೇಲಿದೆ. ಈ ಕ್ಷೇತ್ರದಿಂದ ಆಯ್ಕೆಯಾದರೆ, ಹಗಲಿರುಳು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮನವಿ ಮಾಡಿದರು.
ಪ್ರಚಾರದ ವೇಳೆ ವಿವಿಧ ಗ್ರಾಮಗಳಿಗೆ ಆಗಮಿಸಿದ ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಅಲ್ಲದೇ ಗ್ರಾಮದಲ್ಲಿದ್ದ ಮಹಿಳೆಯರು ಪ್ರಿಯಂಕಾ ಅವರಿಗೆ ಆರತಿ ಎತ್ತಿ, ಹೂ ಮಾಲೆ ಹಾಕಿ ಸನ್ಮಾನಿಸಿದರು. ಈ ವೇಳೆ ಗ್ರಾಮದ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
