ಬೆಳಗಾವಿ-೨೧:ಕುಂದಾನಗರಿ ಬೆಳಗಾವಿ ನಗರದದಲ್ಲಿ ಶನಿವಾರ ಚೆನ್ನಮ್ಮ ವೃತ್ತದಲ್ಲಿ ಜಂಗಮ ಸಮುದಾಯ ಹಾಗೂ ಶ್ರೀರಾಮ ಸೇನಾ ಹಿಂದುಸ್ತಾನ ಹಾಗೂ ವಿವಿಧ ಸಂಘಟನೆ ವತಿಯಿಂದ ನೇಹಾ ಹಿರೇಮಠ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿಧ್ಯಾಭ್ಯಾಸ ಮಾಡುತ್ತಿದ್ದ ವಿಧ್ಯಾರ್ಥಿನಿ ನೇಹಾ ಅವಳನ್ನು ಲವ್ ಜಿಹಾದಿ ಕ್ರೂರ ಮನಸ್ಥಿತಿಯ ಫಯಾಜ್ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ, ಅವನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಕಾಲೇಜಿಗೆ ಅಕ್ರಮವಾಗಿ ಬಂದು ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ಎಂದು ಖಂಡಿಸಿ ಆಕ್ರೋಶ ಹೊರಹಾಕಿದರು.