ಬೆಳಗಾವಿ-೨೨:ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಜನತಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 77 ರ ಪ್ರಕಾರ ಚುನಾವಣಾ ಪ್ರಚಾರ ಅವಧಿಯಲ್ಲಿ ತಮ್ಮ ಚುನಾವಣಾ ಖರ್ಚು-ವೆಚ್ಚಗಳ ಮಾಹಿತಿಯನ್ನು ಕಡ್ಡಾಯವಾಗಿ ಮೂರು ಬಾರಿ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಜತೆಗೆ ಖರ್ಚು-ವೆಚ್ಚಗಳ ಲೆಕ್ಕ ಪುಸ್ತಕ, ಎಲ್ಲ ಮೂಲ ರಶೀದಿಗಳನ್ನು ಖುದ್ದಾಗಿ ಅಥವಾ ತಮ್ಮ ಚುನಾವಣಾ ಏಜೆಂಟ್ ಮೂಲಕ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು.
02-ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಈ ಕೆಳಕಂಡ ಮೂರು ದಿನಾಂಕಗಳಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ಅವಧಿಯಲ್ಲಿ ತಮ್ಮ ಲೆಕ್ಕಪತ್ರಗಳನ್ನು ಪರಿಶೀಲನೆಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
• ಮೊದಲ ಪರಿಶೀಲನೆ- 26-4-2024
• ಎರಡನೇ ಪರಿಶೀಲನೆ-30-4-2024
• ಮೂರನೇ ಪರಿಶೀಲನೆ 04-05-2024
ಎಲ್ಲ ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಮಾಹಿತಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ