ಕಲಬುರಗಿ-೨೨:ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದಿಂದ ಆಳಂದ ಮುಖ್ಯ ರಸ್ತೆಯವರೆಗೆ “ಎತ್ತಿನ ಬಂಡಿ”ಗಳ ಮೂಲಕ ಹಮ್ಮಿಕೊಳ್ಳಲಾದ ಮತದಾರರ ಜಾಗೃತಿ ಅಭಿಯಾನಕ್ಕೆ ಪಟ್ಟಣ ಗ್ರಾಮದ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ಭಂವರಸಿಂಗ್ ಮೀನಾ ಅವರು ಸೋಮವಾರ ಚಾಲನೆ ನೀಡಿದರು.
ನಂತರ ಅವರು ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬರುವ ಮೇ 7 ರಂದು ಪ್ರತಿಯೊಬ್ಬ ಮತದಾರರು ಮತಗಟ್ಟೆಗಳಿಗೆ ತೆರಳಿ ತಪ್ಪದೇ ಮತದಾನ ಮಾಡಬೇಕು. ಮತದಾನ ನಮ್ಮ ಹಕ್ಕಾಗಿ ಅದನ್ನು ನಾವು ಸ್ವ-ಇಚ್ಛೆಯಿಂದ ಚಲಾಯಿಸಬೇಕು ಎಂದು ಗ್ರಾಮಸ್ಥರಲ್ಲಿ ಅರಿವು ಮೂಡಿಸಿದರು.
ಕಲಬುರಗಿ ತಾಲೂಕಿನ ಎಂಸಿಸಿ ನೂಡಲ್ ಅಧಿಕಾರಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್ ಅವರು ಎಲ್ಲರಿಗೂ ಮತದಾನ ಜಾಗೃತಿ ಮತ್ತು ಮತದಾನ ಅಭಿಯಾನದ ಪ್ರತಿಜ್ಞಾ ವಿಧಿ ಭೋದಿಸಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಗೂ ಸ್ವೀಪ್ ನೋಡಲ್ ಅಧಿಕಾರಿ ಅಬ್ದುಲ್ ಅಜೀಮ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಕ್ರೆಪ್ಪಗೌಡ, ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಎನ್ ಆರ್ ಎಲ್ ಎಂ ಸಿಬ್ಬಂದಿಗಳು, ವಿವಿಧ ಇಲಾಖೆಗಳ ಸಿಬ್ಬಂದಿಗಳು, ಪಂಚಾಯತ ಅಭಿವೃದ್ದಿ ಅಧಿಕಾರಿ, ಪಟ್ಟಣ ಗ್ರಾಮದ ಗ್ರಾಮಸ್ಥರು, ಗ್ರಾಮ ಪಂಚಾಯತ ಸಿಬ್ಬಂದಿ ಹಾಗೂ ನರೇಗಾ ಐಇಸಿ ಸಂಯೋಜಕರು ಉಪಸ್ಥಿತರಿದ್ದರು.