23/12/2024
IMG-20240423-WA0003

 

ಬೆಳಗಾವಿ : ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏ. ೨೮ ಭಾನುವಾರ  ಪ್ರಧಾನಿ ನರೇಂದ್ರ ಮೋದಿ ಬೆಳಗಾವಿ ಜಿಲ್ಲೆಗೆ ಎರಡು ಕೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಲಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 11.30 ಕ್ಕೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿನ ಮಾಲಿನಿ ಸಿಟಿಯಲ್ಲಿ 12 ಕ್ಕೆ ಬೃಹತ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬೆಳಗಾವಿ-ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪ್ರಚಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದು. ಈ ಬೃಹತ್ ಕಾರ್ಯಕ್ರಮಕ್ಕೆ ರಾಜ್ಯದ ಘಟಾನುಘಟಿ ನಾಯಕರುಗಳಾದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ, ಮೋಹನ್ ದಾಸ್ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಕೆಂದ್ರ ಸರಕಾರದ ಹತ್ತು ವರ್ಷಗಳ ಸಾಧನೆಗಳ ಕುರಿತು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗಾವಿ-ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಒಟ್ಟಿಗೆ ಸೇರಿಕೊಂಡು ಚುನಾವಣಾ ಪ್ರಚಾರ ಮಾಡಲಿದ್ದೇವೆ ಅಂತ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ ಪ್ರಧಾನಿ ಮೋದಿ ಕಾರ್ಯಕ್ರಮಗಳು ಕುರಿತು ತಿಳಿಸಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿರೋ ನಮೋ. ಎರಡು ಕ್ಷೇತ್ರಗಳಿಂದ ಎರಡು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಸೇರುವ ಸಾಧ್ಯತೆ ಇದೆ ಅಂತ ಮಾಜಿ ಶಾಸಕ ಅನಿಲ್ ಬೆನಕೆ ತಿಳಿಸಿದರು. 2024 ರ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ-ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬಾರಿ ಅಂತರಗಳಿಂದ ಎರಡು ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಅಂಯ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಎಂಬಿ ಜರಳಿ,ಮಾಜಿ ಶಾಸಕ ಅನಿಲ್ ಬೆನಕೆ, ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಸಂಜಯ್ ಪಾಟೀಲ ಮತ್ತಿತರರು ಬಿಜೆಪಿ ಮುಖಂಡರು ಉಪಸ್ಥಿತಿರಿದ್ದರು.

error: Content is protected !!