ಬೆಳಗಾವಿ-೨೭: ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಆತ್ಮಿಯವಾಗಿ ಸ್ವಾಗತಿಸಿದ್ದಾರೆ.
ಜಗದೀಶ ಶೆಟ್ಟರ್ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಚಾರಕ್ಕೆ ಆಗಮಿಸಿದ ನರೇಂದ್ರ ಮೋದಿಯವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
ಬಳಿಕ ಮೋದಿಯವರು ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕಾಕತಿ ಬಳಿ ಇರುವ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ವಾಸ್ತವ್ಯಕ್ಕೆ ತೆರಳಿದರು.
ಪ್ರಧಾನಿ ನರೇಂದ್ರ ಮೋದಿಯವರಿಗೆ ಉತ್ತರ ಕರ್ನಾಟಕ ಶೈಲಿಯ ಜೋಳದ ರೊಟ್ಟಿ ಊಟ ತಯಾರಿಸಿದ್ದಾರೆ. ಮೊದಲಬಾರಿಗೆ ಬೆಳಗಾವಿಯಲ್ಲಿ ವಾಸ್ತವ್ಯ ಹೋಡಲಿರುವ ಪ್ರಧಾನಿ ಮೋದಿಗೆ ಊಟದ ಸವಿ ಬಡಿಸಲು ಖಾದ್ಯ ತಯಾರಿಸಲಾಗಿದೆ.
ನಾಳೆ ಬೆಳಗ್ಗೆ ಮೋದಿಯವರು ಯುಡಿಯುರಪ್ಪ ಮಾರ್ಗದಲ್ಲಿ ಇರುವ ಮಾಲಿನಿ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಿ ಮಾತನಾಡಲಿದ್ದಾರೆ. ಈ ಸಾಮವೇಶದಲ್ಲಿ ಲಕ್ಷಾಂತರ ಜನ ಸೇರುವ ನಿರೀಕ್ಷೆ ಇದೆ.