23/12/2024
IMG-20240427-WA0005

ಬೆಳಗಾವಿ-೨೭: ಇಲ್ಲಿನ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಸಾರ್ವತ್ರಿಕ ಲೋಕಸಭೆ ಚುನಾವಣೆ ಅಂಗವಾಗಿ ಬೆಳಗಾವಿ ಜಿಲ್ಲಾ ಮಟ್ಟದ ಯುವ ಮತದಾರರ *ಸ್ವೀಪ್ ಕಪ್* ಕ್ರಿಕೆಟ್ ಪಂದ್ಯಾವಳಿಗೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಪಂ ಸಿಇಒ ರಾಹುಲ್ ಶಿಂಧೆ ಅವರು, ಬೆಳಗಾವಿ ಜಿಲ್ಲೆಯಾದ್ಯಂತ ಮತದಾರರಿಗೆ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯುವ ಮತದಾರರು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಜತೆಗೆ ಹಿರಿಯ ನಾಗರಿಕರು ಹಾಗೂ ವಿಶೇಷಚೇತರಿಂದ ಮನೆ ಮನೆ ತೆರಳಿ ಮತದಾನದ ಪ್ರಕ್ರಿಯೆ ಉತ್ತಮವಾಗಿ ನಡೆಯುತ್ತಿದೆ ಎಂದು ತಿಳಿಸಿದರು.

ಸ್ವೀಪ್ ಕಪ್ ದಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ವಿಭಾಗದ ತಲಾ ಒಂದು ಯುವ ಮತದಾರರ ತಂಡಗಳು, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಪತ್ರಕರ್ತರ ಸೇರಿದಂತೆ ಒಟ್ಟು 4 ತಂಡಗಳು ಭಾಗವಹಿಸಿದ್ದವು.

ಜಿಪಂ ಯೋಜನಾ ನಿರ್ದೇಶಕ ಡಾ.ಎಂ.ಕೃಷ್ಣರಾಜು, ಜಿಪಂ ಮುಖ್ಯ ಯೋಜನಾಧಿಕಾರಿ ಗಂಗಾಧರ ದಿವಟರ್, ಲೆಕ್ಕಾಧಿಕಾರಿ ಗಂಗಾ ಹಿರೇಮಠ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಶ್ರೀನಿವಾಸ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ, ಸಹಾಯಕ ನಿರ್ದೇಶಕ ಗಣೇಶ, ಜಿಲ್ಲಾ ಐಇ ಸಿ ಸಂಯೋಜಕ ಪ್ರಮೋದ ಗೋಡೆಕರ್ ನಾಮದೇವ ಮಿರಜಕರ, ಮತ್ತಿತರರು ಉಪಸ್ಥಿತರಿದ್ದರು.

error: Content is protected !!