ಬೆಳಗಾವಿ-೨೮: ಸಮೀಪದ ಕಂಗ್ರಾಳಿ ಕೆ.ಎಚ್. ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯಲ್ಲಿ ಭಾನುವಾರ ಸಾರ್ವತ್ರಿಕ ಲೋಕಸಭೆ ಚುನಾವಣೆ-2024ರ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ಧ್ವಜಾರೋಹಣ ನೆರವೇರಿಸಿದರು.
ನಮ್ಮ ನಡೆ ಮತಗಟ್ಟೆ ಕಡೆ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಮೊದಲನೇ ಬಾರಿಗೆ ಮತದಾನ ಮಾಡುವ ಯುವ ಮತದಾರರಿಗೆ ತಮ್ಮ ತಮ್ಮ ಮತಗಟ್ಟೆಗಳು ಮುಂಚಿತವಾಗಿಯೇ ಗುರ್ತಿಸಲು ಹಾಗೂ ಪರಿಚಯಿಸಲು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಹುಲ್ ಶಿಂದೇ ರವರು ತಿಳಿಸಿದರು. ಇದೇ ವೇಳೆ ಯುವ ಮತದಾರರಿಗೆ ಪುಷ್ಪ ನೀಡುವುದರ ಮೂಲಕ ಕಡ್ಡಾಯ ಮತದಾನ ಮಾಡುವಂತೆ ಮನವಿ ಮಾಡಿಕೊಳ್ಳಲಾಯಿತು. ಹಾಗೂ ಮಟಗಟ್ಟೆಗಳಲ್ಲಿ ಧ್ವಜಾರೋಹಣ ಮಾಡುವ ಬಳಿಕ ಕಾರ್ಯಕ್ರಮದಲ್ಲಿ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಜಿಪಂ ಯೋಜನಾ ನಿರ್ದೇಶಕ ಡಾ.ಎಂ.ಕೃಷ್ಣರಾಜು, ತಾಪಂ ಇಒ ರಾಮರೆಡ್ಡಿ ಪಾಟೀಲ, ಸಹಾಯಕ ನಿರ್ದೇಶಕ ಗಣೇಶ, ಜಿಲ್ಲಾ ಐ.ಇ.ಸಿ ಸಂಯೋಜಕ ಪ್ರಮೋದ ಗೋಡೆಕರ ಬಾಹುಬಲಿ ಮೆಳವಂಕಿ ದತ್ತಾತ್ರೇಯ ಚವ್ಹಾಣ, ಪಂಚಾಯತ ಅಭಿವೃದ್ಧಿ ಅಧಿಕಾರಿ ಗೋಪಾಲ ನಾಯಕ ಬಿ.ಎಲ್.ಒ, ಸಿ.ಎಲ್.ಒ, ಶಾಲಾ ಶಿಕ್ಷಕರು, ಗ್ರಾಮಸ್ಥರು, ಗ್ರಾಪಂ ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.