23/12/2024
IMG-20240502-WA0018

ಬೆಳಗಾವಿ-೦೨: ತಂತ್ರಜ್ಞಾನ ಯುಗದಲ್ಲಿ ದೇಶಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸಬಹುದಿತ್ತು. ಅದನ್ನೆಲ್ಲ ಬಿಟ್ಟು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಚುನಾವಣೆಯ ಪ್ರಚಾರ ನಡೆಸಲು ಅನುಕೂಲ ಮಾಡಿಕೊಳ್ಳುವ ಸಲುವಾಗಿ 7 ಹಂತದಲ್ಲಿ ಮತದಾನ ನಡೆಸಲಾಗುತ್ತಿದೆ, ಬಿಜೆಪಿಗರು ಅವರಿಗೆ ಬೇಕಾದ ಹಾಗೇ ಚುನಾವಣೆ ನಡೆಸುತ್ತಿದ್ದಾರೆ ಎಂದು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಿಡಿಕಾರಿದರು.

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಲೋಕಸಭಾ ‌ಚುನಾವಣೆ ರಾಷ್ಟ್ರದ ಮಹತ್ವದ ಚುನಾವಣೆಯಾಗಿದೆ. ಪ್ರಧಾನಿ ನರೇಂದ್ರ ‌ಮೋದಿ ಅವರೇ ಮುಂದುವರೆಸಿಕೊಂಡು ಹೋದರೆ ಎಲ್ಲಾ ಚುನಾವಣೆ ಒಂದೇ ಸಲ ನಡೆಸಿದರು ಅಚ್ಚರಿ ಇಲ್ಲ ಎಂದರು.

ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಮಿಲಿಟರಿ ಆಡಳಿತ ತರಲು‌ ಹೊರಟಿದ್ದಾರೆ. ಬಿಜೆಪಿ ಪ್ರಣಾಳಿಕೆಯಲ್ಲಿ ಮೋದಿ ಗ್ಯಾರಂಟಿ ಎಂದು ನಮೂದಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬದಲಾವಣೆ ಮಾಡುತ್ತಿದ್ದಾರೆ.ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿರುವುದನ್ನು ಮರೆತ್ತಿದ್ದಾರೆ ಎಂದರು.

ಬಿಜೆಪಿ ಪ್ರಣಾಳಿಕೆ ಪಕ್ಷದಲ್ಲ. ಇದು ಮೋದಿ ಗ್ಯಾರಂಟಿ. ಇದನ್ನು ಜನ ನಂಬುವರೆ ಎಂದು ಪ್ರಶ್ನಿಸಿದ ಅವರು, ಚುನಾವಣಾ ಬಾಂಡ್ ಮೇಲೆ ಕೋಟ್ಯಂತರ ರೂ. ಭ್ರಷ್ಟಾಚಾರ ಮಾಡಿದ್ದಾರೆ ಇದರ ಬಗ್ಗೆ ಕೇಂದ್ರ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದರು.

ಕೇಂದ್ರದಲ್ಲಿ ಯುಪಿಎ ಸರಕಾರದ ಸಂದರ್ಭದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ರೈತರ ಮೇಲಿನ ಸಂಪೂರ್ಣ ಸಾಲಾ ಮನ್ನಾ ಮಾಡಲಾಗಿತ್ತು. ಆದರೆ ನರೇಂದ್ರ ಮೋದಿ ಒಬ್ಬ ರೈತನ ಸಾಲ ಮಾಡಿಲ್ಲ. ಇದು ಜನರಿಗೆ ಕೆಟ್ಟ ದಿನ, ಮೋದಿಗೆ ಒಳ್ಳೆಯ ದಿನವಾಗಿದೆ ಎಂದರು.

ಹಾಸನದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನ ಕರ್ಮಕಾಂಡದಿಂದ ಇಡೀ ಕರ್ನಾಟಕದ ರಾಜಕೀಯದ ಹೆಸರನ್ನು ಕೆಡಿಸಿದ್ದಾನೆ. ಕಳೆದ‌ 2014ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನರೇಂದ್ರ ಮೋದಿ ಅವರು ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದಿದ್ದರು. ಈಗ ಅವರ ಪಕ್ಕ ಕುಳಿತುಕೊಂಡು ಚುನಾವಣೆಯ ಪ್ರಚಾರ ನಡೆಸಿದ್ದಾರೆ ಎಂದರು.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾರೂ ಪಾತ್ರ ವಹಿಸಿದ್ದಾರೆ ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ. ಇದು ಕರ್ನಾಟಕ ರಾಜಕೀಯದಲ್ಲಿ ತಲೆ ತಗ್ಗಿಸುವ ಕೆಲಸವಾಗಿದು ಇಡೀ ದೇವೇಗೌಡರ ಕುಟುಂಬ ರಾಜಕೀಯಕ್ಕೆ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಒತ್ತಾಯಿಸಿದರು.

ಶಾಸಕರಾದ ಆಸೀಫ್ ಸೇಠ್, ನಾಗರಾಜ ಯಾದವ, ಮಾಜಿ ಸಚಿವ ಅಭಯಚಂದ್ರ ಜೈನ್, ವಿನಯ ನಾವಲಗಟ್ಟಿ ಸೇರಿದಂತೆ ಇತರರು ಹಾಜರಿದ್ದರು.

error: Content is protected !!