23/12/2024
IMG-20240504-WA0001

ಮುನವಳ್ಳಿ-೦೪: ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ರೋಡ್ ಶೋ ನಡೆಸಿದರು. ಸುಮಾರು ಮೂರು ಕಿಲೋಮೀಟರ್ ಸಾಗಿದ ರೋಡ್ ಶೋನಲ್ಲಿ ಸಾವಿರಾರು ಕಾರ್ಯಕರ್ತರು ಹೆಜ್ಜೆ ಹಾಕಿದರು.

ಸಾಯಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಜಾರ್ ರೋಡ್ ನಲ್ಲಿ ಸಂಚರಿಸಿ ಮಾರುತಿ ಮಂದಿರದ ಬಳಿ ರ್ಯಾಲಿ ಮುಕ್ತಾಯಗೊಂಡಿತು. ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಉರಿ ಬಿಸಿಲನ್ನು ಲೆಕ್ಕಿಸದೆ ಸುಮಾರು 3 ಗಂಟೆಗಳ ಕಾಲ ನಡೆದ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಈ ವೇಳೆ ಮಾತನಾಡಿದ ಸಚಿವರು, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಇರುವವರೆಗೂ ಪಂಚ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ವಿರೋಧ ಪಕ್ಷದವರು ಸುಖಾಸುಮ್ಮನೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು.

ಎಲ್ಲರೂ ತಪ್ಪದೇ ಮತದಾನ ಮಾಡಿ, ಸವದತ್ತಿ ವಿಧಾನಸಭಾ ಕ್ಷೇತ್ರದಿಂದ ಅತಿ ಹೆಚ್ಚು ಮತಗಳ ಮುನ್ನಡೆಯನ್ನು ನಿರೀಕ್ಷಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಗೆದ್ದರೆ ಶಾಸಕ ವಿಶ್ವಾಸ್ ವೈದ್ಯ ಅವರ ಮಾರ್ಗದರ್ಶನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿದ್ದಾನೆ. ಜನರ ಹುರುಪನ್ನು ನೋಡಿದರೆ, ಇದು ನನ್ನ ಪಾಲಿಗೆ ಮತಯಾಚನೆ ರ್ಯಾಲಿ ಥರ ಕಾಣುತ್ತಿಲ್ಲ. ವಿಜಯೋತ್ಸವದ ರ್ಯಾಲಿ ಎನಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ವೇಳೆ ಸವದತ್ತಿ ಶಾಸಕ ವಿಶ್ವಾಸ್ ವೈದ್ಯ, ರವಿ ಯಲಿಗಾರ್, ಉಮೇಶ್ ಬಾಳಿ, ಎಂ.ಆರ್. ಗೋಪಶೆಟ್ಟಿ, ಸಿ.ಬಿ.ಬಾಳಿ, ಸುಮಾ ಯಲಿಗಾರ್, ಸಿ.ಬಿ.ಗೋರನಕೊಳ್ಳ, ಶ್ರೀಕಾಂತ್ ನೇಗಿನಹಾಳ ಸೇರಿದಂತೆ ಹಲವು ಮಂದಿ ಹಾಜರಿದ್ದರು.

error: Content is protected !!