23/12/2024
IMG-20240507-WA0001

ಬೆಳಗಾವಿ-೦೭: ಭಾರತ ಚುನಾವಣಾ ಅಯೋಗವು ಮೇ ೦೭ (ಮಂಗಳವಾರ)ರಂದು ಲೋಕಸಭಾ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನಕ್ಕೆ ನಿಗಧಿಪಡಿಸಿದೆ.

ಸದರಿ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷೆನ್ ೧೩೫ (ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆ-೧೯೬೩ ಕಲಂ ೩ (ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಚುನಾವಣಾ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಈ ಮೂಲಕ ತಿಳಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಬೆಳಗಾವಿ ಉಪವಿಭಾಗ-೨, ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!