ಚಿಕ್ಕೋಡಿ-೦೭: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ವೋಟ್ ಮಾಡಿದ ಎಲ್ಲ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಅನಂತ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಚುನಾವಣಾ ಪ್ರಚಾರ ನಿಮಿತ್ತ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ತುಂಬೆಲ್ಲ ತೆರಳಿ ಪ್ರಚಾರ ನಡೆಸಿದ್ದೇನೆ. ಕಳೆದ ಒಂದು ತಿಂಗಳಿನಲ್ಲಿ ಜೀವನದಲ್ಲಿ ಹೊಸದಾದ ಹಾಗೂ ಬಹುಕಾಲ ನೆನಪಿನಲ್ಲಿ ಉಳಿಯುವ ವಿಶಿಷ್ಟ ಅನುಭವಗಳು ಸಿಕ್ಕಿವೆ. ಹೋದ ಕಡೆಯೆಲ್ಲ ಜನರು ನನ್ನನ್ನು ತಮ್ಮ ಮನೆಯ ಮಗಳಂತೆ ಪ್ರೀತಿ ತೋರಿ, ವಿಶ್ವಾಸ ತುಂಬಿದ್ದಾರೆ. ನಿಮ್ಮೆಲ್ಲರ ಪ್ರೀತಿಯ ಋಣ ದೊಡ್ಡದು, ಮುಂದಿನ ದಿನಗಳಲ್ಲಿ ನಿಮ್ಮ ಸೇವೆಯ ಮೂಲಕ ಆ ಋಣ ತೀರಿಸುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.
ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹಿರಿಯರು, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿಯವರು, ಮಾಜಿ ಡಿಸಿಎಂ, ಶಾಸಕರಾದ ಲಕ್ಷ್ಮಣ ಸವದಿ, ಶಾಸಕರಾದ ರಾಜು ಕಾಗೆ, ಗಣೇಶ್ ಹುಕ್ಕೇರಿ, ಮಹೇಂದ್ರ ತಮ್ಮನ್ನವರ್ ಅವರು ಹಾಗೂ ಮಾಜಿ ಸಚಿವರು, ಮಾಜಿ ಶಾಸಕರು, ಪ್ರಮುಖ ಮುಖಂಡರು ಸೇರಿದಂತೆ ನನ್ನನ್ನು ಬೆಂಬಲಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ.
ಶಾಂತಿಯುತ ಮತದಾನ ನಡೆಯಲು ಕಾರಣಿರ್ಕರಾದ ಚುನಾವಣಾ ಹಾಗೂ ಪೊಲೀಸ್ ಸಿಬ್ಬಂದಿ, ಮಾಧ್ಯಮದವರಿಗೂ ಹುತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.