23/12/2024
IMG-20240509-WA0001

ಬೆಳಗಾವಿ-೦೯: ಜಿಲ್ಲಾಡಳಿತ ವತಿಯಿಂದ ಮೇ. ೧೦ ರಂದು ಬೆಳಗ್ಗೆ ೯ ಗಂಟೆಗೆ ನಗರದ ಗೋವಾವೇಸದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಬಸವ ಜಯಂತಿಯನ್ನು ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಲೋಕಸಭಾ ಚುನಾವಣೆ-೨೦೨೪ರ ನೀತಿ ಸಂಹಿತೆಯಿಂದಾಗಿ ಶ್ರೀ ಬಸವೇಶ್ವರರ ಜಯಂತಿಯನ್ನು ಸರಳವಾಗಿ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!