ಬೆಳಗಾವಿ-೧೪: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಬೆಳಗಾವಿ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ೬ನೇ ತರಗತಿಗಳಿಗೆ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಮೇ.೧೯ ರಂದು ಬೆಳಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯೆವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಸೇವಾಸಿಂಧು ಪೊರ್ಟಲ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಯ್ಕೆ ಮಾಡಿದ ವಸತಿ ಶಾಲೆಗೆ ಭೇಟಿ ನೀಡಿ ಮೇ.೧೩ ರಿಂದ ಹಾಲ್‌ಟಿಕೆಟ್‌ನ್ನು ಪಡೆದುಕೊಳ್ಳಬಹುದು ಎಂದು ಬೆಳಗಾವಿಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಾದ ಡಾ: ಅಬ್ದುಲರಶೀದ ಎಮ್ ಮಿರ್ಜನ್ನವರ ಅವರು ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಮೂಡಲಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ದೂ.೭೪೧೧೨೨೬೮೦೬, ಬೆಳಗಾವಿಯ ರಾಮತೀರ್ಥನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ದೂ.೯೬೨೦೨೯೪೨೬೪, ಸಾಲಹಳ್ಳಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ದೂ.೮೨೯೬೨೨೪೮೦೨, ಐನಾಪೂರ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ದೂ.೮೧೦೫೪೬೫೭೧೧, ಚಿಕ್ಕೋಡಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ದೂ.೯೩೪೨೬೫೫೦೭೩, ಹೂಲಿಕಟ್ಟಿ ಡಾ: ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ೮೮೬೭೪೭೯೩೧೭ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.