ಬೆಳಗಾವಿ-02:ಹೊಸ ವರ್ಷದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಕುಟುಂಬ ಸಮೇತ ಬೆಳಗಾವಿಯ ಹಿಂಡಲಗಾ ಮಹಾಗಣಪತಿಯ ಮಂದಿರ ಹಾಗೂ ಕಪಿಲೇಶ್ವರ ದೇವಾಲಯಕ್ಕೆ ತೆರಳಿ, ವಿಶೇಷ ಪೂಜೆಯನ್ನು ಸಲ್ಲಿಸಿದರು.
ಹೊಸ ವರ್ಷ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ ಹೊತ್ತು ತರಲಿ ಎಂದು ಪ್ರಾರ್ಥಿಸಿದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ್ ಇದ್ದರು.