ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರ್ಕಾರ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪದೇ ಪದೇ ವಿಫಲವಾಗುತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಕೂಡಲೇ ಪೊಲೀಸ್ ಇಲಾಖೆ ಸೂಕ್ತ ನಿರ್ದೇಶನ ನೀಡುವ ಮೂಲಕ ಕೊಲೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಯನ್ನು ವಿಧಿಸಬೇಕು.
ಅಲ್ಲದೇ, ಇಂತಹ ಘಟನೆಗಳು ಪುನರಾವರ್ತಿತ ಆಗುತ್ತಿರುವ ಹಿನ್ನೆಲೆಯಲ್ಲಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಾಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜಗದೀಶ್ ಶೆಟ್ಟರ್ ಅವರು ಆಗ್ರಹಿಸಿದ್ದಾರೆ.