23/12/2024
IMG-20240517-WA0002

ಬೆಳಗಾವಿ-೧೭: ಬಡ ವಿದ್ಯಾರ್ಥಿನಿ ಅಂಜಲಿ ಅಂಬಿಗೇರ ಅವಳ ಹತ್ಯೆ ಖಂಡಿಸಿ ಹಾಗೂ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಕೋಳಿ-ಬೆಸ್ತ ಸಮಾಜದ ಸಂಘ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.

ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೆಮಠಳ ಭೀಕರ ಹತ್ಯೆ ಮರೆಯುವ ಮುನ್ನವೇ ಹುಬ್ಬಳ್ಳಿಯಲ್ಲಿ. ನಮ್ಮ ಸಮಾಜದ ಬಡ ವಿದ್ಯಾರ್ಥಿನಿ ಅಂಜಲಿ ಅಂಬಿಗೇರ ಅವಳನ್ನು ಆರೋಪಿಯೊಬ್ಬ ಭೀಕರವಾಗಿ ಹತ್ಯೆ ಮಾಡಿರುವುದು ಆತಂಕ ಸೃಷ್ಟಿಸಿದೆ. ಓರ್ವ ಪ್ರತಿಭಾನ್ವಿತ ವಿಧ್ಯಾರ್ಥಿನಿಯನ್ನು ಕಳೆದುಕೊಂಡಿರುವುದು ಸಮಾಜಕ್ಕೆ ತುಂಬಲಾರದ ನಷ್ಟ ಅಲ್ಲದೇ ತಂದೆ ತಾಯಿಯನ್ನು ಕಳೆದುಕೊಂಡಿರುವ ಅಂಜಲಿ ಸೇರಿದಂತೆ ನಾಲ್ವರು ಸಹೋದರು ಅಜ್ಜಿ ಮನೆಯಲ್ಲಿ ವಾಸವಾಗಿದ್ದರು ಅಂಜಲಿ ವಿದ್ಯಾಭ್ಯಾಸ ಮಾಡುತ್ತಲೇ ಹೊರಗಡೆ ಹೊಟ್ಟೆಪಾಡಿಗಾಗಿ ಕೆಲಸ ಮಾಡಿ ಕುಟುಂಬ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿದ್ದಳು ಆದರೆ, ಚಿಕಿತ್ಸೆ ದುಷ್ಕರ್ಮಿ ಆಕೆಯನ್ನು ಪ್ರೀತಿಸುವಂತೆ ಕಿರುಕಳ ನೀಡಿ ಕಡೆಗೆ ಅವಳ ಜೀವವನ್ನೇ ಬಲಿ ಪಡಿದಿದ್ದಾನೆ. ದುಷ್ಕರ್ಮಿಗಳಿಗೆ ಕಾನೂನಿನ ಭಯವಿಲ್ಲದ ಕಾರಣ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿವೆ. ಸರ್ಕಾರ ಕೂಡಲೇ ಕಠಿಣ ಕಾನೂನು ಜಾರಿಗೆ ತಂದು ದುಷ್ಕರ್ಮಿಗಳು ಕೃತ್ಯ ಎಸಗುವ ಮುನ್ನ ಹತ್ತು ಬಾರಿ ಯೋಚಿಸಬೇಕು ಅಂತಹ ಕಾನೂನು ಜಾರಿಗೆ ತರಬೇಕು ಅಲ್ಲದೇ, ಆರೋಪಿಗೆ ಮರಣದಂಡನೆ ಕೊಡುವ ಮೂಲಕ ಅಂಜಲಿ ಅಂಬಿಗೇರ ಅವಳಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗಬೇಕು, ಅದೇ ರೀತಿ ಮೃತ ಅಂಜಲಿ ಅಂಬಿಗೇರ ಅವಳ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕು ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ಕೊಡಬೇಕು ಎಂದು ಈ ಮೂಲಕ ಸಮಾಜದ ವತಿಯಿಂದ ಆಗ್ರಹಿಸಿದರು.ಈ ಸಂದರ್ಭದಲ್ಲಿ ಅನೇಕರು ಸಮಾಜದ ಬಾಂದವರು ಉಪಸ್ಥಿತರಿದ್ದರು.

error: Content is protected !!