23/12/2024
IMG-20240518-WA0001

ಬೆಳಗಾವಿ-೧೮: ಸಿಲಿಂಡರ್ ಸ್ಫೋಟಗೊಂಡು ಪತಿ-ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಸುಳಗಾ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಏನೆಂದರೆ, ಮುಂಜಾನೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಾಗಿದೆ. ಇದ್ದಕ್ಕಿದ್ದಂತೆ ಲೈಟ್ ಆನ್ ಮಾಡಿದಾಗ ಸ್ಫೋಟ ಸಂಭವಿಸಿದೆ. ಈ ವೇಳೆ ಮನೆಯಲ್ಲಿದ್ದ ಕಲ್ಲಪ್ಪ ಪಾಟೀಲ್(62), ಸುಮನ್ ಪಾಟೀಲ್(60) ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದು, ಕಲ್ಲಪ್ಪ ಹಾಗೂ ಸುಮನ್ ಅವರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗತ್ಯ ವಸ್ತುಗಳಾದ ಬಟ್ಟೆ, ಆಹಾರ ಧಾನ್ಯಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಘಟನೆ ಕುರಿತು ಕಾಕತಿ ಪೊಲೀಸರು ತನಿಖೆ ಮುಂದುವರೆದಿದೆ.

error: Content is protected !!