23/12/2024
IMG-20240523-WA0000

ಬೆಂಗಳೂರು-೨೩: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 6 ದಿನಗಳ ಕಾಲ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹಳದಿ(yellow)ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಂಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇದೇ ವೇಳೆ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

error: Content is protected !!