ಬೆಳಗಾವಿ-೨೪:ವಡಗಾವಿಯಲ್ಲಿರುವ ಆನಂದ ನಗರದಲ್ಲಿ ನಾಲಾ ಒತ್ತುವರಿ ಮಾಡಿದವರ ವಿರುದ್ದ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಆನಂದ ನಗರದ ನಿವಾಸಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿವಾಸಿಗಳು ಆನಂದ ನಗರದಲ್ಲಿರುಗ ನಾಲೆಯನ್ನು ಕೆಲ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದ ಇಲ್ಲಿನ ಜನರಿಗೆ ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಕೂಡಲೇ ಒತ್ತುವರಿ ಮಾಡಿಕೊಂಡ ನಾಲೆಯನ್ನು ತೆರವು ಮಾಡಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಬೇಕೆಂದರು.
ಸರಕಾರದ ಜಾಗೆ ಒತ್ತುವರಿ ಮಾಡಿಕೊಂಡು ವಾಸಿಸುತ್ತಿರುವರನ್ನು ತೆರವುಗೊಳಿಸಿ ಆ ಸ್ಥಳದಲ್ಲಿ ಸುಜ್ಜಿತವಾದ ಪಾರ್ಕ ನಿರ್ಮಿಸಿಕೊಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.ಈ ಸಂದರ್ಭದಲ್ಲಿ ಅನೇಕರು ಉಪಸ್ಥಿತಿರಿದ್ದರು.